ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಪ್ರಕರಣದ ಕುರಿತು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಹೌದು ಸಿಟಿ ರವಿ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಡಿಸೆಂಬರ್ 31ರಂದೆ ಥಾವರ್ ಚಂದ್ ಗೆಹ್ಲೊಟ್ ಅವರು ಪತ್ರ ಬರೆದಿದ್ದು, ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿ ಪತ್ರ ಬರೆದಿದ್ದಾರೆ. ಸಿಟಿ ರವಿ ಬಂಧನವನ್ನು ಗಂಭೀರವಾಗಿ ಪರಿಗಣಿಸಿ. ಇದು ಚುನಾಯಿತ ಜನಪ್ರತಿನಿಧಿಗೆ ಸಂಬಂಧಿಸಿದಂತಹ ವಿಚಾರವಾಗಿದೆ. ಹೀಗಾಗಿ ಮಧ್ಯಪ್ರದೇಶ ಮಾಡಿದ ರಾಜ್ಯಪಾಲರು, ಕ್ರಮ ಕೈಗೊಳ್ಳಿ ಎಂದು ಸಿಎಂಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸದನದಲ್ಲಿ ಎಂಎಲ್ಸಿ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪ್ರಾಸ್ಟಿಟ್ಯೂಟ್ ಎಂದು ಪದ ಬಳಸಿ ಅಶ್ಲೀಲವಾಗಿ ನಿಂದಿಸಿದ್ದರು. ವಿಚಾರವಾಗಿ ಹೆಬ್ಬಾಳ್ಕರ್ ಅವರು ಬೆಳಗಾವಿಯ ಹಿರೇ ಬಾಗೇವಾಡಿ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ದೂರು ನೀಡಿದ್ದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಅನ್ವಯ ಸಿಟಿ ರವಿ ವಿರುದ್ಧ ಪೊಲೀಸರು ದಾಖಲಿಸಿಕೊಂಡಿದ್ದರು.
ಮರುದಿನ ಸುವರ್ಣ ಸೌಧದಿಂದಲೇ ಪೊಲೀಸರು ಸಿಟಿ ರವಿ ಅವರನ್ನು ಅರೆಸ್ಟ್ ಮಾಡಿ ಪೊಲೀಸ್ ವ್ಯಾನ್ ನಲ್ಲಿ ಕರೆದುಕೊಂಡು ಸುಮಾರು ಮೂರೂ ಜಿಲ್ಲೆಗಳನ್ನು ಸುತ್ತಾಡಿಸಿಕೊಂಡು ತದನಂತರ ಬೆಳಗಾವಿಯ ಕೋರ್ಟಿಗೆ ಹಾಜರುಪಡಿಸಿದ್ದಾರೆ. ಈ ವೇಳೆ ಸಿಟಿ ರವಿ ಅವರಿಗೆ, ಕೋರ್ಟ್ ಜಾಮೀನು ನೀಡಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪತ್ರ ಬರೆದಿದ್ದಾರೆ ಎನ್ನಲಾಗಿದೆ.