ಬೆಂಗಳೂರು : ರಾಜ್ಯ ಸರ್ಕಾರವು ಬ್ರಾಹ್ಮಣ ಸಮುದಾಯವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಯೋಜನೆ ಹಾಗೂ ಸನ್ನಿಧಿ ಯೋಜನೆ ಮೂಲಕ ಹಲವು ಸಹಾಯಧನಗಳನ್ನು ನೀಡಲಿದೆ.
ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೂಲಕ ಬ್ರಾಹ್ಮಣರ ಶ್ರೇಯೋಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳು
ಕಲ್ಯಾಣ ಯೋಜನೆ
* ಬ್ರಾಹ್ಮಣರಿಗಾಗಿ ಸಾಮೂಹಿಕ ವಿವಾಹ / ಉಪನಯನಗಳ ಆಯೋಜನೆ
* ಬಿಪಿಎಲ್ ಬ್ರಾಹ್ಮಣ ಕುಟುಂಬದ ಕೃಷಿಕರನ್ನು / ಅಡಿಗೆಯವರನ್ನು / ಪುರೋಹಿತರನ್ನು ಮದುವೆಯಾಗುವ ವಧುವಿನ ಹೆಸರಲ್ಲಿ ₹3 ಲಕ್ಷ ಬಾ೦ಡ್
ಸನ್ನಿಧಿ ಯೋಜನೆ
* ಅರ್ಹ ಪ್ರಿ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ಬ್ರಾಹ್ಮಣ ವಿದ್ಯಾರ್ಥಿ / ವಿದ್ಯಾರ್ಥಿನಿಯರಿಗೆ ಪ್ರತ್ಯೇಕ & ಉಚಿತ ಹಾಸ್ಟೆಲ್ ನಿರ್ಮಾಣ / ಹಾಸ್ಟೆಲ್ ಸೌಲಭ್ಯ ಕಲ್ಪಿಸುವುದು / ಹಾಸ್ಟೆಲ್ ಶುಲ್ಕ ಮರು ಪಾವತಿ ಸೌಲಭ್ಯ
* ಬ್ರಾಹ್ಮಣ ಉದ್ಯೋಗಸ್ಥ ಮಹಿಳೆಯರಿಗೆ ಹಾಸ್ಟೆಲ್ ನಿರ್ಮಾಣ