ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿಯೇ ಮೊದಲು ಎನ್ನುವಂತೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲೇ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಯಾಗಿದ್ದಾರೆ. ಈ ಮೂಲಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬಾಳೆಹೊನ್ನೂರಿನಿಂದ ಹಾಸನ ಮಾರ್ಗವಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಚನ್ನರಾಯಪ್ಪಟ್ಟಣ, ಹಿರಿಸಾವೆ ಮೂಲಕ ಬೆಂಗಳೂರಿಗೆ ಶರಣಾಗತಿ ಘೋಷಿಸಿದ್ದಂತ 6 ನಕ್ಸಲರನ್ನು ಕರೆದುಕೊಂಡು ಬರಲಾಗಿತ್ತು. ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾಗೆ ಸಂಜೆ.6 ಗಂಟೆಗೆ ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಗೂ ಬೇಕಿದ್ದಂತ ಮೋಸ್ಟ್ ವಾಂಟೆಂಡ್ 6 ನಕ್ಸಲರು ಆಗಮಿಸಿದರು.
ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿದಂತ ನಕ್ಸಲರು, ಆ ಬಳಿಕ ಅವರ ಸಮ್ಮುಖದಲ್ಲಿ ಶರಣಾಗತಿಯಾದರು. ಸಿಎಂ ಸಿದ್ಧರಾಮಯ್ಯ ಅವರು ಶರಣಾಗತಿಯಾದಂತ 6 ನಕ್ಸಲರಿಗೆ ಹೂ ಗುಚ್ಚ ನೀಡಿ, ಸಾರ್ವಜನಿಕ ಬದುಕಿಗೆ ಬರ ಮಾಡಿಕೊಂಡರು.
ನಕ್ಸಲರಿಗೆ ವಿಶೇಷ ಪ್ಯಾಕೇಜ್ ಘೋಷಣೆ
ರಾಜ್ಯ ಸರ್ಕಾರದಿಂದ ಶರಣಾಗಿಯಾದಂತ 6 ನಕ್ಸಲರಿಗೆ ಪ್ಯಾಕೇಜ್ ಘೋಷಣೆ ಮಾಡಿದೆ. ಮೂರು ಕೆಟಗರಿಯಲ್ಲಿ ಪ್ಯಾಕೇಜ್ ನೀಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.
ಕೆಟಗರಿ ಎ ವರ್ಗದಡಿ ನಮ್ಮ ರಾಜ್ಯದವರೇ ಆಗಿದ್ದು, ನಕ್ಸಲ್ ಚಟುವಟಿಕೆಯಲ್ಲಿ ತೊಡಗಿ, ಕೇಸ್ ಇದ್ದು ಶರಣಾದವರಿಗೆ 7.50 ಲಕ್ಷ ಹಣ ನೀಡುತ್ತಿದೆ.
ಕೆಟಗರಿ ಬಿ ವರ್ಗದಡಿ ಹೊರ ರಾಜ್ಯದ ನಕ್ಸಲರಿಗೆ ಶಸ್ತ್ರಸಜ್ಜಿತ ನಕ್ಸಲ್ ಗುಂಪಿನ ಸದಸ್ಯನಾಗಿದ್ದು, ಒಂದಕ್ಕಿಂತ ಹೆಚ್ಚು ಸದಸ್ಯರಾಗಿದ್ದರೇ 4 ಲಕ್ಷ ಪ್ಯಾಕೇಜ್ ನೀಡುವುದಾಗಿ ತಿಳಿಸಿದೆ.
ಕೆಟಗರಿ ಸಿ ವರ್ಗದಡಿ ನಕ್ಸಲ್ ಗುಂಪಿನೊಂದಿಗೆ ಸಂಪರ್ಕ ಹೊಂದಿದ್ದು, ಪ್ರಕರಣಗಳು ಇದ್ದರೂ 2 ಲಕ್ಷ ಹಣವನ್ನು ಪ್ಯಾಕೇಜ್ ನಡಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸಿಎಂ ಸಮ್ಮುಖದಲ್ಲಿ ಯಾರೆಲ್ಲ ನಕ್ಸಲರು ಶರಣಾಗತಿ?
- ಬಾಳೆಹೊಳೆ ಕಳಸದ ವನಜಾಕ್ಷಿ
- ಮುಂಡಗಾರು ಶೃಂಗೇರಿಯ ಲತಾ
- ದಕ್ಷಿಣ ಕನ್ನಡದ ಕುಂತಲೂರಿನ ಸುಂದರಿ
- ರಾಯಚೂರಿನ ಮಾರಪ್ಪೆ ಅರೋಳಿ
- ತಮಿಳುನಾಡಿನ ವಸಂತ ಟಿ
- ಕೇರಳದ ಎನ್.ಜೀಶಾ