ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾಲಿಟಿಕ್ಸ್ ಸದ್ದು ಮಾಡುತ್ತಿದ್ದು, ಇದರ ನಡುವೆಯೇ ಜನವರಿ 13 ರಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ. ಹೌದು ಡಿನ್ನರ್ ಕಾಳಗದ ನಡುವೆ ಇದೀಗ ಸಂಸದರಮಯ್ಯ ಅವರು ಸಿಎಲ್‌ಪಿ ಸಭೆಯನ್ನು ನಿಗದಿ ಮಾಡಿದ್ದಾರೆ. ಜನವರಿ 13 ರಂದು ಬೆಂಗಳೂರಿನಲ್ಲಿ ಖಾಸಗಿ ಹೋಟೆಲ್ ನಲ್ಲಿ ಈ CLP ಸಭೆ ನಡೆಯಲಿದೆ.
ಗೊಂದಲದ ನಡುವೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಜನವರಿ 13ರಂದು ಸೋಮವಾರ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಒಂದು ಸಿ.ಎಲ್‌ಪಿ ಸಭೆ ನಡೆಯಲಿದೆ. ವಿಶೇಷ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ವಿಧಾನ ಮಂಡಲ ಅಧಿವೇಶನದ ಬಳಿಕ ಈ ಒಂದು ಸಿ ಎಲ್ ಪಿ ಸಭೆ ಕರೆದಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದರು. ಇದರ ಬೆನಲ್ಲೇ ವಿದೇಶ ಪ್ರವಾಸದಲ್ಲಿದ್ದ ಗೃಹ ಸಚಿವ ಜಿ ಪರಮೇಶ್ವರ್ ಬೆಂಗಳೂರಿಗೆ ಬಂದ ತಕ್ಷಣ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಡಿನ್ನರ್ ಪಾರ್ಟಿ ಅರೆಂಜ್ ಮಾಡಿದ್ದರು. ಆದರೆ ನಿನ್ನೆ ಹೈಕಮಾಂಡ್ ಖಡಕ್ ಸೂಚನೆಯ ಮೇರೆಗೆ ಇಂದು ನಡೆಯಬೇಕಿದ್ದ ಈ ಒಂದು ಡಿನ್ನರ್ ಪಾರ್ಟಿ ರದ್ದಾಗಿದೆ. ಇದರ ಬೆನ್ನಲ್ಲೇ ಜನವರಿ 13 ರಂದು ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಕರೆದಿದ್ದು, ತೀವ್ರ ಕುತೂಹಲ ಮೂಡಿಸಿದೆ.