ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಇಂದು ತ್ರಿಬಲ್ ಮರ್ಡರ್ ನಡೆದಿದ್ದು, ಪತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ.
ಹೌದು ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಮೂವರ ಡೆಡ್ಲಿ ಮರ್ಡರ್ ಆಗಿದೆ. ಪತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಈ ಒಂದು ಹತ್ಯೆ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಪೀಣ್ಯ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾನೆ ಎಂಬುದು ತನಿಖೆಯ ವೇಳೆ ಹೊರಬೀಳಲಿದೆ.