ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಪತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪರಾರಿಯಾಗಿದ್ದ. ಇದೀಗ ಪೀಣ್ಯ ಠಾಣೆಯ ಪೊಲೀಸರು ಆರೋಪಿ ಪತಿಯನ್ನು ಇದೀಗ ಅರೆಸ್ಟ್ ಮಾಡಿದ್ದಾರೆ.
ಹೌದು ಜಾಲಹಳ್ಳಿ ಕ್ರಾಸ್ ಬಳಿ ಹೋಂಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗಂಗರಾಜು ಎಂಬಾತ ತನ್ನ ಪತ್ನಿ ಭಾಗ್ಯ ಹಾಗೂ ಇಬ್ಬರು ಮಕ್ಕಳನ್ನು ಮನೆಯಲ್ಲಿ ಕೊಲೆ ಮಾಡಿ ಬಳಿಕ ಪರಾರಿಯಾಗಿದ್ದ. ಇದೀಗ ಪಿಣ್ಯ ಠಾಣೆಯ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದು ಘಟನೆ ಕುರಿತಂತೆ ತನಿಖೆ ಕೈಗೊಂಡಿದ್ದಾರೆ.