ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಿಂದ ಬಿಗಿ ಪೊಲೀಸ್ ಭದ್ರತೆಯಲ್ಲಿ ಮೋಸ್ಟ್ ವಾಂಟೆಂಡ್ 6 ನಕ್ಸಲರನ್ನು ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾಗೆ ಕರೆತರಲಾಗಿದೆ. ಈಗ ಸಿಎಂ ಗೃಹ ಕಚೇರಿಗೆ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಸಿದ್ದರಾಮಯ್ಯ, ಡಾ.ಜಿ ಪರಮೇಶ್ವರ್ ಸಮ್ಮುಖದಲ್ಲಿ ಶರಣಾಗತಿಯಾಗಲಿದ್ದಾರೆ.
ಚಿಕ್ಕಮಗಳೂರಿನ ಬಾಳೆಹೊನ್ನೂರಿನಿಂದ ರಸ್ತೆ ಮಾರ್ಗದ ಮೂಲಕ ಹಾಸನ, ಹಿರಿಸಾವೆಯಿಂದ ಬೆಂಗಳೂರಿಗೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡಿಗೆ ಬೇಕಿದ್ದಂತ 6 ಮೋಸ್ಟ್ ವಾಂಟೆಂಡ್ ನಕ್ಸಲರನ್ನು ಕರೆತರಲಾಗಿದೆ. ಈಗ ಸಿಎಂ ಗೃಹ ಕಚೇರಿ ಕೃಷ್ಣಾಗೆ ಆರು ನಕ್ಸಲರು ಆಗಮಿಸಿದ್ದಾರೆ.
ಸಿಎಂ ಗೃಹ ಕಚೇರಿಗೆ ಆಗಮಿಸಿರುವಂತ ಆರು ನಕ್ಸಲರು ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಸಮ್ಮುಖದಲ್ಲಿ ಕೆಲವೇ ಕ್ಷಣಗಳಲ್ಲಿ ಶರಣಾಗತಿ ಆಗಲಿದ್ದಾರೆ. ಆ ಬಳಿಕ ಅವರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸೋ ಸಾಧ್ಯತೆ ಇದೆ.
ಬೆಂಗಳೂರು ಜನತೆ ಗಮನಕ್ಕೆ: ಜ.10ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಮುಂಬೈನಲ್ಲಿ ಮೊದಲ HMPV ವೈರಸ್ ಕೇಸ್ ಪತ್ತೆ: ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆ | HMPV Case