2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ ಮಾಡಿದ್ದು ರೈತರು ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಬೆಳೆ ಸಮೀಕ್ಷೆ ಆ್ಯಪ್‍ನಲ್ಲಿ ನೋಂದಾಯಿಸಬೇಕು. ಸರಕಾರದ ವಿವಿಧ ಯೋಜನೆಗಳಾದ ಫಸಲ ಭೀಮಾ ಯೋಜನೆ, ಬೆಳೆ ಪರಿಹಾರ, ಬೆಂಬಲ ಬೆಲೆ ಯೋಜನೆಗಳ ಸೌಲಭ್ಯವನ್ನು ಪಡೆಯಲು ಬೆಳೆ ಸಮೀಕ್ಷೆ ಮಾಡುವುದು ಅವಶ್ಯಕವಾಗಿರುತ್ತದೆ.
ಬೆಳೆ ವಿಮೆ ಮಾಡಿಸಿದ ರೈತರು ಕಡ್ಡಾಯವಾಗಿ ತಾವು ಬೆಳೆದ ಬೆಳೆಯನ್ನು ಬೆಳೆ ಸಮೀಕ್ಷೆಯಡಿ ನೋಂದಾಯಿಸಬೇಕು. ಬೆಳೆ ಸಮೀಕ್ಷೆ ಆ್ಯಪ್‍ನ್ನು ಗೂಗಲ್ ಪ್ಲೇಸ್ಟೋರ್‍ನಲ್ಲಿ ಲಭ್ಯವಿದ್ದು, ಹಿಂಗಾರು ರೈತರ ಬೆಳೆ ಸಮೀಕ್ಷೆ 2024 ಎಂದು ಟೈಪ್ ಮಾಡಿ ಆ್ಯಪ್ ಡೌನ್‍ಲೋಡ್ ಮಾಡುವ ಮೂಲಕ ಪಡೆದು ಬೆಳೆ ಸಮೀಕ್ಷೆ ಮಾಡಬಹುದು ಹಾಗೂ ಖಾಸಗಿ ನಿವಾಸಿಗಳನ್ನು ಸಂಪರ್ಕಿಸಿ ಖಾಸಗಿ ನಿವಾಸಿ ಬೆಳೆ ಆ್ಯಪ್ ಮೂಲಕವು ಬೆಳೆ ಸಮೀಕ್ಷೆಯನ್ನು ಮಾಡಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.