ಬಾಗಲಕೋಟೆ : ಬ್ಯಾಂಕ್ ನಲ್ಲಿ ಸಾಲ ಪಡೆದುಕೊಂಡಿದ್ದು ಆ ಸಾಲವನ್ನು ತೀರಿಸಲ್ಲವೆಂದು ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿ ಮಠ್ ವಿರುದ್ಧ ಈ ಒಂದು ಹಲ್ಲೆ ಆರೋಪ ಕೇಳಿಬಂದಿದೆ. ಹಲ್ಲೆಗೆ ಒಳಗಾದಂತಹ ಆನಂದ್ ಮುತ್ತಗಿ ಎನ್ನುವವರು ಬಾಗಲಕೋಟೆಯ ಶಹರ ಪೊಲೀಸ್ ಠಾಣೆಯಲ್ಲಿ ಚರಂತಿಮಠ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ.
ಚರಂತಿಮಠ ಬೀಳೂರು ಗುರುಬಸವ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿದ್ದಾರೆ. ಇದೇ ಸಹಕಾರ ಸಂಘದಿಂದ ಆನಂದ ಮುತ್ತಗಿ 35 ಲಕ್ಷ ರೂಪಾಯಿ ಸಾಲ ಪಡೆದಿದ್ದರು. 2018ರಿಂದ ಸಾಲ ಮರುಪಾವತಿ ಮಾಡದೆ ಬಾಕಿ ಉಳಿಸಿಕೊಂಡಿದ್ದರು. ಇದೀಗ ಸಾಲದ ಹಣ ಕಟ್ಟದಿದ್ದಕ್ಕೆ ವೀರಣ್ಣ ಚರಂತಿಮಠ ಹಲ್ಲೆ ಮಾಡಿದ್ದಾರೆಂದು ಆರೋಪ ಮಾಡಿದ್ದಾರೆ. ಈ ಕುರಿತು ಹಲ್ಲೆಗೆ ಒಳಗಾದ ಆನಂದ್ ಮುತ್ತಗಿ ಅವರು ಮಾತನಾಡಿ, ಬ್ಯಾಂಕ್ ನಲ್ಲಿ ಪಡೆದ 35 ಲಕ್ಷ ಪಾವತಿ ಸೇರಲು ಆಗಿರಲಿಲ್ಲ ಜಮೀನು ಮಾರಿ ಹಣ ಪಾವತಿಸಲು ನಿರ್ಧರಿಸಿದೆ.
ಸಹಕಾರ ಸಂಘದ ಸಿಬ್ಬಂದಿ ನನ್ನನ್ನು ಬಸವೇಶ್ವರ ಶಿಕ್ಷಣ ಸಂಸ್ಥೆ ಸಂಘದ ಕಚೇರಿಗೆ ಕರೆದುಕೊಂಡು ಹೋಗಿದ್ದರು. ನಾನು ಕಚೇರಿಗೆ ಹೋಗ್ತಿದ್ದಂತೆ ಅಧ್ಯಕ್ಷ ವೀರಣ್ಣ ಚರಂತಿಮಠ ನಿಂದಿಸಿದ್ದರು. ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕವಾಗಿ ಹಿಂಸಿಸಿ ಹಲ್ಲೆ ಮಾಡಿದ್ದರು. ಹಲ್ಲೆಯಿಂದ ನಾನು ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಮೇಲೆ ಹಲ್ಲೆ ನಡೆಸಿದ ವೀರಣ್ಣ ಚರಂತಿಮಠ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಿದ್ದೇನೆ. ನನಗೆ, ನನ್ನ ಕುಟುಂಬದವರಿಗೆ ಏನಾದ್ರೂ ಆದರೆ ಚರಂತಿಮಠ ಕಾರಣ ಎಂದು ಹೇಳಿದ್ದಾರೆ.