ಬೆಂಗಳೂರು : ಬಂಡೀಪುರ ಅರಣ್ಯದಲ್ಲಿ ರಾತ್ರಿ ವೇಳೆ ಕೇವಲ ಎರಡು ಬಸ್ ಹಾಗು ಆಂಬುಲೆನ್ಸ್ ಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದ್ದು, ರಾತ್ರಿ 9 ಗಂಟೆಯವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ. ಬಳಿಕ, ಕೇರಳದಿಂದ ಕರ್ನಾಟಕದ ಕಡೆ 2 ಬಸ್ಗಳಿಗೆ ಮತ್ತು 1 ಆ್ಯಂಬುಲೆನ್ಸ್ಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ.
ಈ ವಿಚಾರವಾಗಿ ವಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿವೆ. ಇದಕ್ಕೆ ಸಚಿವ ಈಶ್ವರ್ ಖಂಡ್ರೆ ತಿರುಗೇಟು ನೀಡಿದ್ದು, ಬಂಡೀಪುರ ಅರಣ್ಯದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ನಮ್ಮ ಸರ್ಕಾರ ಯಾವುದೇ ಹೊಸ ಅನುಮತಿ ನೀಡಿಲ್ಲ. ಹೀಗಾಗಿ, ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ಎರಡು ಬಸ್ ಸೇವೆಗಳನ್ನು ಅನುಮತಿಸಿರುವ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಪ್ರಮಾಣಿಕ ಆರೋಪಗಳನ್ನು ಮಾಡುತ್ತಿವೆ ಮತ್ತು ಜನರಿಗೆ ತಪ್ಪು ಮಾಹಿತಿ ಹರಡಲು ಪ್ರಯತ್ನಿಸುತ್ತಿವೆ.
ಹಳೆ ನೀತಿ ಮುಂದುವರಿಯುತ್ತಿರುವುದನ್ನೇ ಸುಳ್ಳು ಆರೋಪ ಮಾಡಿ, ಕಾಂಗ್ರೆಸ್ ವಿರುದ್ಧ ಅಪ ಪ್ರಚಾರ ಮಾಡಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿವೆ. ಇದು ನಾಚಿಕೆಗೇಡಿತನದ ಕೆಲಸ. ಸುಳ್ಳು ಬಿಜೆಪಿ ಅವರ ಮನೆ ದೇವರಾಗಿದೆ.
2009ರಲ್ಲಿ ತುರ್ತು ಪರಿಸ್ಥಿತಿಗಳು ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಆಂಬುಲೆನ್ಸ್ ಸೇವೆ ಸೇರಿದಂತೆ ಎರಡು ಬಸ್ ವಾಹನ ಸಂಚಾರಕ್ಕೆ ಅನುಮತಿ ನೀಡಿತ್ತು. ಇತ್ತೀಚೆಗೆ ಅದೇ ಅನುಮತಿಯನ್ನು ಕಾನೂನು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿನೊಂದಿಗೆ ಮುಂದುವರಿಸಲಾಗಿದೆ.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಮಾಡಲಿಕ್ಕೆ ಬೇರೆ ಕೆಲಸವಿಲ್ಲದೆ, ಎಲ್ಲ ವಿಷಯಗಳನ್ನೂ ರಾಜಕೀಯಗೊಳಿಸಲು ಪ್ರಯತ್ನಿಸುತ್ತಿವೆ. ನಮ್ಮ ಸರ್ಕಾರ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಸಂಪೂರ್ಣ ಬದ್ಧವಾಗಿದೆ. ವನ್ಯಜೀವಿ ಸಂರಕ್ಷಣೆಗೆ ಕಾಯ್ದೆಯನ್ನು ತಂದದ್ದು ಇಂದಿರಾ ಗಾಂಧಿ ಅವರ ಸರ್ಕಾರ. ನಾವು ಅದನ್ನು ಕಟ್ಟುನಿಟ್ಟಾಗಿ ಜಾರಿ ಮಾಡುತ್ತೇವೆ. ಆದರೆ, ಬಿಜೆಪಿ ಶಾಸಕರು ದೇವರು ಎಂದು ಪೂಜಿಸುವ ಆನೆಗಳನ್ನು ಗುಂಡಿಟ್ಟು ಕೊಲ್ಲಲು ಸದನದಲ್ಲಿ ಅನುಮತಿ ಕೇಳುತ್ತಾರೆ! ಇಂತಹವರು ಈಗ ವನ್ಯಜೀವಿ ಸಂರಕ್ಷಣೆ ಬಗ್ಗೆ ಪಾಠ ಹೇಳಲು ಬರುತ್ತಿದ್ದಾರೆ. ಇದು ‘ಭೂತದ ಬಾಯಲ್ಲಿ ಭಗವದ್ಗೀತೆ’ ಓದುವಂತಾಗಿದೆ ಎಂದಿದ್ದಾರೆ.
ಬಂಡೀಪುರ ಅರಣ್ಯದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ನಮ್ಮ ಸರ್ಕಾರ ಯಾವುದೇ ಹೊಸ ಅನುಮತಿ ನೀಡಿಲ್ಲ. ಹೀಗಾಗಿ, ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ಎರಡು ಬಸ್ ಸೇವೆಗಳನ್ನು ಅನುಮತಿಸಿರುವ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಪ್ರಮಾಣಿಕ ಆರೋಪಗಳನ್ನು ಮಾಡುತ್ತಿವೆ ಮತ್ತು ಜನರಿಗೆ ತಪ್ಪು ಮಾಹಿತಿ ಹರಡಲು ಪ್ರಯತ್ನಿಸುತ್ತಿವೆ.
ಹಳೆ… pic.twitter.com/XXiDxSvW6q
— Eshwar Khandre (@eshwar_khandre) January 9, 2025