ಬೆಂಗಳೂರು : ಕಾಂಗ್ರೆಸ್ ನಾಯಕರ ಬೆನ್ನೆಲೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪರಾಜಿತ ಬಿಜೆಪಿ ಅಭ್ಯರ್ಥಿಗಳ ಜೊತೆಗೆ ಭೋಜನಕೂಟ ಸಭೆ ನಡೆಸಲಿದ್ದು, ಅಲ್ಲದೆ ಮಾಜಿ ಸಚಿವರು, ಶಾಸಕರುಗಳು ಕೂಡ ಈ ಒಂದು ಭೋಜನಕೂಟ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಖಾಸಗಿ ಹೋಟೆಲಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆಯಲಿದೆ ಸಂವಿಧಾನ ಗೌರವ ಅಭಿಯಾನದ ವಿಚಾರವಾಗಿ ಈ ಒಂದು ಸಭೆ ನಡೆಯಲಿದ್ದು, ಸುಧೀರ್ಘ ಕಾಲದ ಬಳಿಕ ಪರಾಜೀತ ಅಭ್ಯರ್ಥಿಗಳ ಜೊತೆಗೆ ಈ ಒಂದು ಸಭೆ ನಡೆಯಲಿದೆ. ಸಭೆಯಲ್ಲಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಗಳ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನೊಂದು ಕಡೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ವರಿಷ್ಠರನ್ನು ಭೇಟಿಯಾಗಿ ಬಿ ವೈ ವಿಜಯೇಂದ್ರ ಅವರ ವಿರುದ್ಧ ದೂರು ನೀಡಿದ ಬೆನ್ನಲ್ಲೇ ಇದೀಗ ಬಿವೈ ವಿಜಯೇಂದ್ರ ಅವರು ಇಂದು ಭೋಜನಕೂಟ ಸಭೆ ಆಯೋಜನೆ ಮಾಡಿದ್ದು ತೀವ್ರ ಕುತೂಹಲ ಮೂಡಿಸಿದೆ.
ಇಂದು ಬೆಂಗಳೂರಿನ ಖಾಸಗಿ ಹೋಟೆಲಲ್ಲಿ ನಡೆಯುವ ಸಭೆಗೆ ಪಕ್ಷದ ಎಲ್ಲಾ ಮಾಜಿ ಸಚಿವರು, ಶಾಸಕರುಗಳು, ಹಾಗೂ ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ ಎಲ್ಲರಿಗೂ ಕೂಡ ಆಹ್ವಾನ ನೀಡಲಾಗಿದ್ದು, ಸಭೆಯಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಕಾದು ನೋಡಬೇಕು.