ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗ್ಲೇ ರೆಗ್ಯುಲರ್ ಬೇಲ್ ಪಡೆದು ಬಿಡುಗಡೆಯಾಗಿರುವ ನಟ ದರ್ಶನ್ ಹಾಗೂ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ಸೇರಿದಂತೆ ಎಲ್ಲ ಆರೋಪಿಗಳು ಹಾಜರಾಗಲಿದ್ದಾರೆ.
ಹೌದು ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಇಂದು ಬೆಂಗಳೂರಿನ ಸೇಷನ್ಸ್ ಕೋರ್ಟ್ ಗೆ ನಟ ದರ್ಶನ್ ಹಾಜರಾಗಲಿದ್ದಾರೆ. ಅಲ್ಲದೇ A1 ಆರೋಪಿ ಪವಿತ್ರ ಗೌಡ A2 ದರ್ಶನ್ ಮುಖಾಮುಖಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಎಲ್ಲಾ ಆರೋಪಿಗಳನ್ನು ಕೂಡ ಪೊಲೀಸರು ಇಂದು ಕೋರ್ಟಿಗೆ ಹಾಜರುಪಡಿಸಲಿದ್ದಾರೆ.
ಒಂದು ವೇಳೆ ಕೋರ್ಟಿಗೆ ಹಾಜರಾಗದಿದ್ದಲ್ಲಿ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಬೇಕು. ಶೀಘ್ರದಲ್ಲಿ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಯಾಗಲಿದೆ. ಹಾಗಾಗಿ ಇಂದು ಅಕಸ್ಮಾತ್ ಕೋರ್ಟ್ ಗೆ ದರ್ಶನ್ ಹಾಜರಾದರೆ, ನಟ ದರ್ಶನ್ ಹಾಗೂ ಪವಿತ್ರ ಗೌಡ ಮುಖಾಮುಖಿ ವಿಚಾರಣೆ ಎದುರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ