ಹಾವೇರಿ : ಹಾವೇರಿಯಲ್ಲಿ ತಡರಾತ್ರಿ ಭೀಕರವಾದ ಅಪಘಾತವಾಗಿದ್ದು, ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಬಳಿ ನಿನ್ನೆ ರಾತ್ರಿ ಸಂಭವಿಸಿದೆ.
ಮೃತರನ್ನು ಕುಸುಮಾ (56) ಮತ್ತು ಕುಮಾರ (34) ಎಂದು ಗುರುತಿಸಲಾಗಿದೆ. ಮೃತರು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದ ನಿವಾಸಿಗಳು. ಹಂಸಭಾವಿಯ ತಮ್ಮ ಸಂಬಂಧಿಕರ ಮನೆಗೆ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಕುರಿತು ಹಿರೇಕೆರೂರು ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.