ಬೆಂಗಳೂರು : ಎಲೆಕ್ಟ್ರಿಕಲ್ ಗುತ್ತಿಗೆದಾರನಿಗೆ ಟ್ರಾನ್ಸ್ಫಾರ್ಮರ್ ನೀಡಲು ಬೆಸ್ಕಾಂ ಸಹಾಯಕ ಇಂಜಿನಿಯರ್ ಒಬ್ಬರು 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಸ್ವೀಕರಿಸುವ ವೇಳೆ, ಬೆಸ್ಕಾಂ ಇಂಜಿನಿಯರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಎಲೆಕ್ಟ್ರಿಕಲ್ ಗುತ್ತಿಗೆದಾರ ಆಗಿರುವ ಮಾರುತಿ ರಾಮಣ್ಣ ಎನ್ನುವವರಿಗೆ, ಟ್ರಾನ್ಸ್‌ಫಾರ್ಮರ್ ನೀಡಲು ಇಸ್ರೋ ಬಡಾವಣೆ ಉಪ ವಿಭಾಗದ ಸಹಾಯಕ ಎಂಜಿನಿಯರ್ ವಿನಯ್ ಕುಮಾರ್ ಅವರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ವಿನಯ್ 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಎಲೆಕ್ಟ್ರಿಕಲ್ ಗುತ್ತಿಗೆದಾರ ಮಾರುತಿ ಲೋಕಾಯುಕ್ತಕ್ಕೆ ಈ ಕುರಿತು ದೂರು ನೀಡಿದ್ದರು.ದೂರು ಆಧರಿಸಿ, ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದ ಲೋಕಾಯುಕ್ತ ಪೊಲೀಸ್ ಅಧಿಕಾರಿ ಅಡಿವೇಶ್ ಗುಡಿಗೊಪ್ಪ ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರು ನಗರ ಎಸ್‌ಪಿ ಶ್ರೀನಾಥ ಮಹಾದೇವ ಜೋಷಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು.