ಬೆಂಗಳೂರು : ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದಂತಹ ಪೌರ ಕಾರ್ಮಿಕರಿಗೆ ಮುಂಬರುವ ಮಾರ್ಚ್ ತಿಂಗಳಿನಲ್ಲಿ ನೇಮಕಾತಿ ಆದೇಶ ನೀಡಲಾಗುತ್ತದೆ ಎಂದು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ಈ ವಿಚಾರವಾಗಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಯಂ ಮಾಡಿಕೊಳ್ಳುತ್ತಿರುವ ಪೌರಕಾರ್ಮಿಕರ ಪೈಕಿ ಪೊಲೀಸ್ ತಪಾಸಣೆ ಹಾಗೂ ಮೀಸಲಾತಿ ಪ್ರಮಾಣ ಪತ್ರಗಳ ಸಿಂಧುತ್ವ ಕಾರ್ಯ ನಡೆಯುತ್ತಿದ್ದು, ಆ ಪ್ರಕ್ರಿಯೆಯನ್ನು ಮಾರ್ಚ್ 2025ರ ಅಂತ್ಯದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ತಂತ್ರಜ್ಞಾನ ಎಷ್ಟೇ ಬೆಳೆದಿದ್ದರೂ ಕೂಡಾ ಪೌರಕಾರ್ಮಿಕರು ಇನ್ನು ಪೊರಕೆಯಿಂದಲೇ ಬೀದಿಗಳನ್ನು ಸ್ವಚ್ಛ ಮಾಡುತ್ತಿದ್ದಾರೆ. ಅದನ್ನು ನಾವು ಬದಲಿಸಲು ಮುಂದಾಗಲಾಗುತ್ತಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರಿಗೆ ಶೀಘ್ರ ಯಾಂತ್ರಿಕೃತ ಯಂತ್ರಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.
ನಗರದಲ್ಲಿ ಮನೆ-ಮನೆಯಿಂದ ಸಂಗ್ರಹಿಸುವ ಕಸದ ಪದ್ದತಿ ಸರಿಯಾಗಿ ಜಾರಿಯಾಗಬೇಕಿದೆ. ನಾಗರೀಕರು ರಸ್ತೆ ಬದಿ ಕಸ ಬಿಸಾಡುತ್ತಾರೆ, ಅದನ್ನು ಪೌರಕಾರ್ಮಿಕರೇ ಸ್ವಚ್ಛಗೊಳಿಸಬೇಕಿದೆ. ಮನೆ-ಮನೆಯಿಂದ ಕಸ ಸಂಗ್ರಹಿಸುವ ಪದ್ದತಿ ಸರಿಯಾಗಿ ಜಾರಿಯಾದರೆ ಬಹುತೇಕ ಸಮಸ್ಯೆ ನಿವಾರಣೆಯಾಗಲಿದೆ ಎಂದು ಹೇಳಿದರು.