ನವದೆಹಲಿ: ದೆಹಲಿಯ ಶಾಲೆಗಳಿಗೆ ಇತ್ತೀಚೆಗೆ ನಡೆದ ಸರಣಿ ಹುಸಿ ಇ ಮೆಲ್ ಮೂಲಕ ಕನಿಷ್ಠ 23 ಬಾಂಬ್ ಬೆದರಿಕೆಗಳನ್ನು ವಿದ್ಯಾರ್ಥಿಯೊಬ್ಬ ಕಳುಹಿಸಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
ದೆಹಲಿಯ ವಿವಿಧ ಶಾಲೆಗಳಿಗೆ 12 ನೇ ತರಗತಿಯ ವಿದ್ಯಾರ್ಥಿ ಇಮೇಲ್ಗಳನ್ನು ಕಳುಹಿಸಿದ್ದಾನೆ. ವಿಚಾರಣೆಯ ಸಮಯದಲ್ಲಿ, ನಾನು ಪರೀಕ್ಷೆಗಳಿಂದ ತಪ್ಪಿಸಿಕೊಳ್ಳಲು ಈ ರೀತಿ ಬೆದರಿಕೆ ಹಾಕಿದ್ದೇನೆ. ಈ ಹಿಂದೆಯೂ ಬೆದರಿಕೆ ಇಮೇಲ್ಗಳನ್ನು ಕಳುಹಿಸಿದ್ದಾಗಿ ವಿದ್ಯಾರ್ಥಿ ಒಪ್ಪಿಕೊಂಡಿದ್ದಾನೆ ಎಂದು ದೆಹಲಿ ಪೊಲೀಸ್ ದಕ್ಷಿಣ ಡಿಸಿಪಿ ಅಂಕಿತ್ ಚೌಹಾಣ್ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.
ಇತ್ತೀಚೆಗೆ ಕಳೆದ ಕೆಲವು ತಿಂಗಳಿನಿಂದ ದೆಹಲಿಯ ಹಲವು ಶಾಲೆಗಳಿಗೆ ಸಾಲು ಸಾಲು ಬಾಂಬ್ ಬೆದರಿಕೆ ಸಂದೇಶ ಬರುತ್ತಿತ್ತು. ಘಟನೆ ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು. ಪ್ರಕರಣದ ಮೂಲ ಪತ್ತೆ ಹಚ್ಚಿದ ಪೊಲೀಸರಿಗೆ ಇದೀಗ ಶಾಕ್ ಎದುರಾಗಿದ್ದು, ತಾನೇ ಬಾಂಬ್ ಬೆದರಿಕೆ ಹಾಕಿರುವುದಾಗಿ ಬಾಲಕ ಒಪ್ಪಿಕೊಂಡಿದ್ದಾನೆ.