ಬೆಂಗಳೂರು: ಸರ್ಕಾರಿ ಕೆರೆಯ ಜಮೀನನ್ನು ಒತ್ತುವರಿ ಮಾಡಿ ಶೌಚಾಲಯ ಮತ್ತು ಮನೆಗಳನ್ನು ನಿರ್ಮಾಣ ಮಾಡಿದ್ದ 3 ಆರೋಪಿಗಳಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಆದೇಶಿಸಿದೆ.
ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲ್ಲೂಕು, ಅತ್ತಿಬೆಲೆ ಹೋಬಳಿ, ಹೆಬ್ಬಗೋಡಿ ಗ್ರಾಮದ ಸರ್ವೇ ನಂ.159 ರ 32 ಎಕರೆ 13 ಗುಂಟೆ ಸರ್ಕಾರಿ ಕೆರೆಯ ಜಮೀನನ್ನು ಆರೋಪಿಗಳಾದ ಎ1- ಕೃಷ್ಣಪ್ಪ, ಎ2- ನಂಜಪ್ಪ, ಎ3- ರಾಮಯ್ಯ, ಎ4- ಎಂ.ವೆಂಕಟೇಶ್, ಎ5- ಹೆಚ್.ಎಂ.ಸುಬ್ಬಣ್ಣ, ಎ6- ಲಕ್ಷ್ಮೀದೇವಿ, ಎ7- ಪಿಳ್ಳಪ್ಪ ರವರುಗಳು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ಶೌಚಾಲಯ ಮತ್ತು ವಾಸದ ಮನೆಗಳನ್ನು ನಿರ್ಮಾಣ ಮಾಡಿದ್ದು, ಸದರಿ ರವರ ವಿರುದ್ಧ ಬಿಎಂಟಿಎಫ್ ಪೊಲೀಸ್ ಠಾಣೆ ಮೊ.ಸಂ: 19/2012 : 192(ಎ) ಕೆ.ಎಲ್.ಆರ್ ಆಕ್ಟ್ ರೀತ್ಯಾ ದಿನಾಂಕ: 22-02-2012 ಪ್ರಕರಣ ದಾಖಲಾಗಿ ಬಿಎಂಟಿಎಫ್ ಪೊಲೀಸ್ ಠಾಣೆಯಲ್ಲಿ ತನಿಖೆ ಕೈಗೊಳ್ಳಲಾಗಿತ್ತು.
ಸದರಿ ಪ್ರಕರಣದಲ್ಲಿ ತನಿಖೆಯನ್ನು ಕೈಗೊಂಡು ಸಾಕ್ಷಾಧಾರಗಳನ್ನು ಮತ್ತು ದಾಖಲಾತಿಗಳನ್ನು ಸಂಗ್ರಹಿಸಿ ಆರೋಪಿಗಳ ವಿರುದ್ಧ ಮಾನ್ಯ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ, ಬೆಂಗಳೂರು ರಲ್ಲಿ ಸದರಿ ಪ್ರಕರಣದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದು, ಘನ ನ್ಯಾಯಾಲಯವು ವಿಚಾರಣೆ ನಡೆಸಿರುತ್ತದೆ. ಈ ವಿಚಾರಣಾ ಕಾಲದಲ್ಲಿ ಆರೋಪಿಗಳು ಸರ್ಕಾರಿ ಕೆರೆಯ ಸ್ವತ್ತನ್ನು ಅಕ್ರಮವಾಗಿ ಒತ್ತುವರಿ ಮಾಡಿ ಶೌಚಾಲಯ ಮತ್ತು ಮನೆಗಳನ್ನು ನಿರ್ಮಾಣ ಮಾಡಿರುವುದು ಧೃಡಪಟ್ಟಿದ್ದರಿಂದ ಸದರಿ ಆರೋಪಿಗಳಾದ ಎ4- ಎಂ.ವೆಂಕಟೇಶ್, ಎ5- ಹೆಚ್.ಎಂ.ಸುಬ್ಬಣ್ಣ ಮತ್ತು ಎ6- ಲಕ್ಷ್ಮೀದೇವಿ ರವರುಗಳಿಗೆ 1 ವರ್ಷ ಸಜೆ ಮತ್ತು 5,000/-ರೂ ದಂಡ ವಿಧಿಸಿ, ದಿನಾಂಕ: 13-12-2024 ರಂದು ಮಾನ್ಯ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಆದೇಶಿಸಿರುತ್ತದೆ.
ಸದರಿ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಬಿಎಂಟಿಎಫ್ ಪೊಲೀಸ್ ಇನ್ಸ್‌ಪೆಕ್ಟರ್ ಟಿ.ಡಿ ರಾಜು ರವರು ತನಿಖೆ ಕೈಗೊಂಡು ದೋಷಾರೋಪಣಾ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿರುವ ಉತ್ತಮ ತನಿಖೆಗಾಗಿ ಮತ್ತು ತನಿಖೆಗೆ ಸಹಕರಿಸಿದ ಸಿಬ್ಬಂದಿಯವರಿಗೆ ಹಾಗೂ ನ್ಯಾಯಾಲಯದಲ್ಲಿ ಸದರಿ ಪ್ರಕರಣದ ವಿಚಾರಣಾ ಕಾಲದಲ್ಲಿ ಸಹಕರಿಸಿದ ಕೋರ್ಟ್ ಮಾನಿಟರಿಂಗ್ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೀಮಂತ್ ಕುಮಾರ್ ಸಿಂಗ್, ಐ.ಪಿ.ಎಸ್, ಎಡಿಜಿಪಿ, ಬಿಎಂಟಿಎಫ್ ಹಾಗೂ ಡಾ|| ಸುಮನ್ ಡಿ.ಪನ್ನೇಕರ್, ಐ.ಪಿ.ಎಸ್, ಎಸ್.ಪಿ, ಬಿಎಂಟಿಎಫ್ ರವರು ಪ್ರಶಂಸೆಯನ್ನು ವ್ಯಕ್ತಪಡಿಸಿರುತ್ತಾರೆ.
GOOD NEWS: ಬೆಂಗಳೂರಲ್ಲಿ ದಕ್ಷಿಣ ಭಾರತದ ಮೊದಲ ಸಾಂಕ್ರಾಮಿಕ ರೋಗ ಸಂಶೋಧನೆ ಮತ್ತು ರೋಗ ನಿರ್ಣಯ ಲ್ಯಾಬ್ ಸ್ಥಾಪನೆ
GOOD NEWS: ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘ಸಾರಿಗೆ ನೌಕರ’ರಿಗೆ ಗುಡ್ ನ್ಯೂಸ್