ಬೆಂಗಳೂರು: ಕಳೆದ ಕೆಲ ದಿನಗಳಿಂದ ತಮ್ಮ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮುಷ್ಕರ ನಡೆಸುತ್ತಿದ್ದಾರೆ. ಇವರ ಬೇಡಿಕೆಯಲ್ಲಿ ಒಂದಾಗಿರುವಂತ ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ಧರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಆಶಾ ಕಾರ್ಯಕರ್ತೆಯರ ಮುಷ್ಕರವನ್ನು ವಾಪಾಸ್ಸು ಪಡೆದಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 15,000 ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂಘಟನೆಯೊಂದಿಗೆ ಮಾತುಕತೆ ನಡೆಸಿ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು.
ಇಂದು ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಜೊತೆಗಿನ ಸಿಎಂ ಸಿದ್ಧರಾಮಯ್ಯ ನಡೆಸಿದಂತ ಸಂಧಾನ ಯಶಸ್ವಿಯಾಗಿದೆ. ಅವರ ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ಧರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದ ಆಶಾ ಕಾರ್ಯಕರ್ತೆಯರ ಮುಷ್ಕರ ವಾಪಸ್ ಪಡೆಯಲು ನಿರ್ಧಾರಿಸಿದ್ದಾಗಿ ತಿಳಿದು ಬಂದಿದೆ.
Electricity Bill: 2 ಬಿಲಿಯನ್ ರೂಪಾಯಿ ವಿದ್ಯುತ್ ಬಿಲ್ ಕಂಡು ಆಘಾತಕ್ಕೊಳಗಾದ ವ್ಯಕ್ತಿ!
ಬೆಂಗಳೂರಿನ ಜನತೆಗೆ ಗಮನಕ್ಕೆ: ಜ.13ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut