ಬೆಂಗಳೂರು: ಜನವರಿ.15, 2025ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿಯೇ ಸಚಿವ ಸಂಪುಟ ಸಭೆ ನಡೆಯಲಿದೆ. ಬೇರೆಲ್ಲಿಯೂ ನಡೆಯುತ್ತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ.
ಈ ಸಂಬಂಧ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ದಿನಪತ್ರಿಕೆಗಳಲ್ಲಿ ಮೂಲಭೂತ ಸೌಕರ್ಯದ ಕೊರತೆಯಿಂದ ಸಚಿವ ಸಂಪುಟ ಸಭೆ ನಂದಿ ಬೆಟ್ಟಕ್ಕೆ ಸ್ಥಳಾಂತರಿಸಲಾಗಿದೆ ಎಂಬುದಾಗಿ ವರದಿ ಮಾಡಲಾಗಿದೆ. ಆದರೇ ಅದು ಸುಳ್ಳು ಎಂಬುದಾಗಿ ತಿಳಿಸಿದೆ.
ದಿನಾಂಕ 15-02-2025ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿಯೇ ಸಚಿವ ಸಂಪುಟ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
Electricity Bill: 2 ಬಿಲಿಯನ್ ರೂಪಾಯಿ ವಿದ್ಯುತ್ ಬಿಲ್ ಕಂಡು ಆಘಾತಕ್ಕೊಳಗಾದ ವ್ಯಕ್ತಿ!