ಬೆಂಗಳೂರು: ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ 6ನೇ ಬಾರಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿ ಆದೇಶಿಸಿದೆ.
ಈ ಸಂಬಂಧ ಸಾರಿಗೆ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸುವಂತೆ ವಾಹನ ಸವಾರರು ಮನವಿ ಮಾಡಿದ್ದರು. ಅಲ್ಲದೇ ಈವರೆಗೆ ಕೆಲವೇ ಕೆಲವು ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿದ್ದಾರೆ ಎಂದಿದೆ.
ಈ ಹಿನ್ನಲೆಯಲ್ಲಿ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಜನವರಿ 31ರವರೆಗೆ ಅವದಿ ವಿಸ್ತರಿಸಿ ಆದೇಶಿಸಿರುವುದಾಗಿ ತಿಳಿಸಿದೆ. ಈ ಮೂಲಕ 6ನೇ ಬಾರಿಗೆ ರಾಜ್ಯ ಸರ್ಕಾರದಿಂದ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ.
ಜ.15ರಂದು ಮಲೆಮಹದೇಶ್ವರ ಬೆಟ್ಟದಲ್ಲೇ ಸಚಿವ ಸಂಪುಟ ಸಭೆ: ರಾಜ್ಯ ಸರ್ಕಾರ ಸ್ಪಷ್ಟನೆ
Electricity Bill: 2 ಬಿಲಿಯನ್ ರೂಪಾಯಿ ವಿದ್ಯುತ್ ಬಿಲ್ ಕಂಡು ಆಘಾತಕ್ಕೊಳಗಾದ ವ್ಯಕ್ತಿ!