ದಕ್ಷಿಣ ಕನ್ನಡ: ಜಿಲ್ಲೆಯ ಮುಸ್ಲಿಂ ಯುವತಿಯೊಬ್ಬಳು ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ಹಿಂದೂ ಯುವಕನನ್ನು ಮದುವೆಯಾಗಿ ದಾಂಪತ್ಯಕ್ಕೆ ಕಾಲಿಟ್ಟಿರುವಂತ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪಟ್ರು ಗ್ರಾಮದ ಹರೀಶ್ ಗೌಡ ಜೊತೆಗೆ ಮುಸ್ಲೀಂ ಯುವತಿ ಸುಹಾನಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾಳೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಇಬ್ಬರು ವಿವಾಹವಾಗಿದ್ದಾರೆ.
ನಾಪತ್ತೆಯಾಗಿದ್ದಂತ ಮುಸ್ಲೀಂ ಯುವತಿ ಹಿಂದೂ ಯುವಕನೊಂದಿಗೆ ಮದುವೆಯಾಗಿ ಬಂದು ಪೊಲೀಸ್ ಠಾಣೆಯಲ್ಲಿ ತಮಗೆ ರಕ್ಷಣೆ ಕೊಡುವಂತೆ ಕೋರಿದ್ದಾಳೆ.