ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಳವಾಗುತ್ತಿದ್ದು, 3-4 ದಿನದ ಬಳಿಕ ರಾಜ್ಯದಲ್ಲಿ ಮತ್ತೆ ಚಳಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮಳೆಯ ಮಾರುತಗಳು ರೂಪಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚಳಿಯ ಪ್ರಮಾಣ ಕೊಂಚ ಇಳಿಕೆಯಾಗಿದ್ದು, ಮೂರ್ನಾಲ್ಕು ದಿನದ ಬಳಿ ರಾಜ್ಯದಲ್ಲಿ ಮತ್ತೆ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಳೆದ ಎರಡ್ಮೂರು ವಾರ ಶುಭ್ರಾಕಾಶ ಇದ್ದ ಪರಿಣಾಮ ರಾಜ್ಯದಲ್ಲಿ ಚಳಿ ಪ್ರಮಾಣ ವಿಪರೀತ ಹೆಚ್ಚಾಗಿದ್ದು, ಇದೀಗ ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮಳೆ ಮೋಡಗಳು ರೂಪುಗೊಂಡಿವೆ. ಹೀಗಾಗಿ ಚಳಿ ಪ್ರಮಾಣ ಕಡಿಮೆಯಾಗಿದ್ದು, 3-4 ದಿನದ ಬಳಿಕ ಮತ್ತೆ ಚಳಿ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.