ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರು, ತಮ್ಮ ಪ್ರಭಾವ ಬಳಸಿಕೊಂಡು, ಟಿ.ಚೌಡಯ್ಯ ಎಂಬುವವರ ಹೆಸರಿನಲ್ಲಿ ಅಕ್ರಮವಾಗಿ 50:50 ಅನುಪಾತದಲ್ಲಿ ನಿವೇಶನಗಳನ್ನು ಮಂಜೂರು ಮಾಡಿಸಿ, 50*80 ಅಳತೆಯ ಎರಡು ನಿವೇಶನಗಳನ್ನು ತಮ್ಮ ಮಗಳು, ಅಳಿಯನ ಹೆಸರಿಗೆ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ಅವರು ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಅವರು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರವರು, ತಮ್ಮ ಪ್ರಭಾವ ವನ್ನು ಬಳಸಿಕೊಂಡು, ಸರ್ಕಾರಕ್ಕೆ ಸೇರಿದ ಮತ್ತು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿಸಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೆ.ಚೌಡಯ್ಯ ಎಂಬುವವರ ಹೆಸರಿಗೆ 50:50 ಅನುಪಾತದಲ್ಲಿ ಒಟ್ಟು ಆರು ನಿವೇಶನಗಳನ್ನು ಅಕ್ರಮವಾಗಿ ಕೊಡಿಸಿ, ಅದರಲ್ಲಿ 50+80 ಅಡಿ ಅಳತೆಯ ಎರಡು ನಿವೇಶನಗಳನ್ನು ಅವರ ಮಗಳು ಶ್ರೀಮತಿ ಡಿ.ಅನ್ನಪೂರ್ಣ ಮತ್ತು ಅಳಿಯ ಜಿ.ಎಂ.ವಿಶ್ವೇಶ್ವರಯ್ಯನವರ ಹೆಸರಿಗೆ ಪಡೆದುಕೊಂಡಿರುವ ಬಗ್ಗೆ ತನಿಖೆ ನಡೆಸಿ, ಎಲ್ಲಾ ತಪಿತಸ್ಥರನ್ನು ನಾನು ನಿಮ್ಮ ಠಾಣೆಯಲ್ಲಿ ದಾಖಲು ಮಾಡಿಸಿರುವ 11/2024 ಸಂಖ್ಯೆಯ ಪ್ರಕರಣದಲ್ಲಿ ಆರೋಪಿಗಳನ್ನಾಗಿಸಿ, ಇವರುಗಳ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಮನವಿ ಮಾಡಿದ್ದಾರೆ.