ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ತೆಂಗಿನ ಕಾಯಿ ಕದಿಯಲು ಹೋಗಿದ್ದ ವ್ಯಕ್ತಿಯೊಬ್ಬನನ್ನು ತೋಟದ ಮಾಲೀಕ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಳೂಕಿನ ಬೂದಿಹಾಳ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ತೆಂಗಿನ ಕಾಯಿ ಕದಿಯಲು ಯತ್ನಿಸಿದ್ದ ಸಿದ್ದರಾಜು ಮೇಲೆ ತೋಟದ ಮಾಲೀಕ ದೊಣ್ಣೆಯಿಂದ ಹೊಡೆದಿದ್ದು, ಈ ವೇಳೆ ತೀವ್ರ ರಕ್ತಸ್ರಾವದಿಂದ ಕುಸಿದ ಬಿದ್ದಿದ್ದ ಸಿದ್ದರಾಜುನನ್ನು ಪತ್ನಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲೇ ಸಿದ್ದರಾಜು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.