ಚಿಕ್ಕಮಗಳೂರು : ಸಚಿವೆ ಲಕ್ಷ್ಮಿ ಹೆಬ್ಬಳ್ಕರ್ ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಹತ್ಯೆ ಮಾಡುತ್ತೇವೆ ಎಂದು ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಮನೆಗೆ ಬೆದರಿಕೆ ಪತ್ರ ಬಂದಿದೆ.
ಇಂದು ಚಿಕ್ಕಮಗಳೂರಿನ ಬಸವನಹಳ್ಳಿಯಲ್ಲಿರುವ ಸಿ.ಟಿ. ರವಿಗೆ ಬೆದರಿಕೆ ಪತ್ರ ಬಂದಿದ್ದು, ಬೆದರಿಕೆ ಪತ್ರದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಕ್ಷಮೆ ಕೇಳದಿದ್ದರೆ 15 ದಿನದೊಳಗೆ ನಿಮ್ಮನ್ನು ಹಾಗೂ ನಿಮ್ಮ ಪುತ್ರನನ್ನು ಹತ್ಯೆ ಮಾಡಲಾಗುವುದು ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿದೆ.
ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ ಸಿ.ಟಿ. ರವಿ ಪಿಎ ಚೇತನ್ ಅವರು ಬಸವನಹಳ್ಳಿ ಪೊಲೀಸ್ ಠಾಣೆಗೆ ಪತ್ರದ ಸಮೇತ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.