ಬೆಂಗಳೂರು : 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮಾರ್ಚ್ 1 ರಿಂದ 8ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಸರ್ವಜನಾಂಗದ ಶಾಂತಿಯ ತೋಟ ಘೋಷವಾಕ್ಯದಡಿ ನಡೆಯಲಿದೆ. ಈ ಹಿನ್ನೆಲೆ ಮೂರು ಸ್ಪರ್ಧಾ ವಿಭಾಗಗಳಿಗೆ ಅರ್ಹ ಚಲನಚಿತ್ರಗಳನ್ನು ಆಹ್ವಾನಿಸಲಾಗಿದೆ.
ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದ ಆಯ್ಕೆಗಾಗಿ ಸಲ್ಲಿಸಬೇಕಾದ ಕಥಾ ಚಿತ್ರಗಳು ಕನಿಷ್ಠ 70 ನಿಮಿಷದ ಅವಧಿಯದ್ದಾಗಿರಬೇಕು. ಜನವರಿ 1, 2024 ರಿಂದ ಡಿಸೆಂಬರ್ 31, 2024ರ ಒಳಗೆ ನಿರ್ಮಾಣಗೊಂಡಿರಬೇಕು. ಕನ್ನಡ ಮತ್ತು ಕರ್ನಾಟಕ ರಾಜ್ಯದ ಯಾವುದೇ ಉಪಭಾಷೆಯಲ್ಲಿ ತಯಾರಾಗಿರುವ ಕಥಾಚಿತ್ರಗಳನ್ನು ಕಳುಹಿಸಬಹುದು.
ಚಲನಚಿತ್ರಗಳನ್ನು ಸಲ್ಲಿಸುವ ಪ್ರಕ್ರಿಯೆಯು 2025ರ ಜನವರಿ 9 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಜನವರಿ 23ರವರೆಗೆ ಅವಕಾಶವಿದೆ. www.biffes.org ಮೂಲಕ ಎಲ್ಲಾ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಪ್ರತಿ ಚಿತ್ರಕ್ಕೂ ಪ್ರವೇಶ ಶುಲ್ಕ ₹3,000 ಇರುತ್ತದೆ.