ಕಲಬುರಗಿ : ಆಟೋ ಚಾಲಕನೊಬ್ಬ ಬಾಲಕಿಗೆ ಅತ್ಯಾಚಾರದ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಇದರಿಂದ ಮನನೊಂದು 8 ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ.
ಜೇವರ್ಗಿ ಪಟ್ಟಣದ ಮಹಿಬೂಬ ಎಂಬಾತನ ಕಿರುಕುಳದಿಂದ ಬೇಸತ್ತು 8 ನೇ ತರಗತಿ ವಿದ್ಯಾರ್ಥಿನಿ ಮಹಾಲಕ್ಷ್ಮಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು, ಮಹಾಲಕ್ಷ್ಮಿ ಶಾಲೆಗೆ ಹಾಗೂ ಮನೆಗೆ ಹೋಗುವಾಗ ರಸ್ತೆಯಲ್ಲಿ ಹಿಂಬಾಲಿ ನನ್ನ ಜೊತೆ ಮಾತನಾಡದಿದ್ದರೆ ನಿನ್ನನ್ನು ಅತ್ಯಾಚಾರ ಮಾಡುತ್ತೇನೆ. ಎಂದು ಮೆಹಬೂಬ್ ಬೆದರಿಸುತ್ತಿದ್ದ ಹೀಗಾಗಿ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ವಿದ್ಯಾರ್ಥಿನಿಯ ತಂದೆ ಯಶವಂತರಾಯಗೌಡ ಬಿರಾದಾರ ಆರೋಪಿಸಿದ್ದಾರೆ.
ವಿದ್ಯಾರ್ಥಿನಿಯ ತಂದೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಸಂಬಂಧ ಪ್ರಕರಣ ದಾಖಲಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.