ಶಿವಮೊಗ್ಗ : ಇಬ್ಬರೂ ಸಹೋದರರ ನಡುವೆ ಗಲಾಟೆ ನಡೆದು ಗಲಾಟೆ ವಿಕೋಪಕ್ಕೆ ತಿರುಗಿ ಒಡಹುಟ್ಟಿದ ತಮ್ಮನನ್ನೇ ಅಣ್ಣನೊಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಅಣ್ಣ ಲೋಕೇಶ್ ಎಂಬಾತನಿಂದ ತಮ್ಮ ಗಿರೀಶ್ ನಾಯಕ್ (28) ಎನ್ನುವವನ ಕೊಲೆಯಾಗಿದೆ. ಶಿವಮೊಗ್ಗ ಹೊರವಲಯದ ಅನುಪಿನಕಟ್ಟೆಯಲ್ಲಿ ಈ ಒಂದು ಕೊಲೆ ನಡೆದಿದೆ. ವೈಯಕ್ತಿಕ ದ್ವೇಷಕ್ಕೆ ಅಣ್ಣ ಲೋಕೇಶ್ ತಮ್ಮ ಗಿರೀಶ್ ನಾಯಕನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿ ಲೊಕೇಶನ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.