ಬೆಂಗಳೂರು : ಬೆಂಗಳೂರಿನಲ್ಲಿ ಅಮಾನವೀಯ ಘಟನೆ ನಡೆದಿದ್ದು ರಸ್ತೆ ಮೇಲೆ ಮಲಗಿದ್ದ ಮೂರು ಹಸುಗಳ ಕೆಚ್ಚಲುಗಳನ್ನು ಕಿಡಿಗೇಡಿಗಳು ಕೊಯ್ದಿರುವ ಪ್ರಕರಣ ನಡೆದಿದೆ.ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಬೆಂಗಳೂರಿನ ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾಕೆ ಭೇಟಿ ನೀಡಿ ಸರ್ಕಾರ ಕೂಡಲೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕರಾಳ ಸಂಕ್ರಾಂತಿಯನ್ನು ಆಚರಿಸುವುದಾಗಿ ಎಚ್ಚರಿಕೆ ನೀಡಿದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸ್ಥಳೀಯ ನಿವಾಸಿಗಳಿಂದ ಮಾಹಿತಿ ಪಡೆದ ಆ ಅಶೋಕ್ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಇದೊಂದು ಅಮಾನವೀಯ ಘಟನೆ ಈ ಕೃತ್ಯವನ್ನು ಖಂಡಿಸುತ್ತೇನೆ. ಕ್ರೌರ್ಯ ಮೆರೆದ ದುಷ್ಕರ್ಮಿಗಳ ವಿರುದ್ಧ ಸರ್ಕಾರ ಕೂಡಲೇ ಕರಿಲವಾದಂತಹ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಈ ಬರಿಯ ಸಂಕ್ರಾಂತಿಯನ್ನು ಕರಾಳ ಸಂಕ್ರಾಂತಿಯಾಗಿ ಆಚರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಿಸಿ ಕ್ಯಾಮೆರಾ ಅಳವಡಿಸಿದ್ದು ಅದನ್ನು ಒಡೆದು ಹಾಕಿದ್ದಾರೆ. ಪಶು ಆಸ್ಪತ್ರೆ ಉಳಿವಿಗಾಗಿ ಹೋರಾಡಿದವರಿಗೆ ಇದೀಗ ಭಯ ಶುರುವಾಗಿದೆ.ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ. ಇಷ್ಟೆಲ್ಲಾ ಘಟನೆ ನಡೆದರೂ ಸ್ಥಳೀಯ ಶಾಸಕರು ಇಲ್ಲಿಗೆ ಬಂದಿಲ್ಲ ಎಂದು ಆರ್ ಅಶೋಕ್ ಕಿಡಿ ಕಾರಿದರು.