ವಿಜಯಪುರ : ವಿಜಯಪುರದಲ್ಲಿ ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಒಂದು ತಿಳಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಇದ್ದಂತಹ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ನಡೆದಿದೆ
ಹೌದು ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ಬಳಿ ನಡೆದಿದೆ. ಸರ್ಕಾರಿ ಬೈಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರು ಸಾವನಪ್ಪಿದ್ದಾರೆ. ಸಾಗರ್ ಬೈಜಿನಾಳ್ (21) ಹಾಗೂ ಸುದೀಪ ಗುದ್ದಿ (21) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.