ಕೊಪ್ಪಳ : ಕೊಪ್ಪಳ ನಗರದಲ್ಲಿ ಭೀಕರವಾದಂತಹ ಕೊಲೆ ನಡೆದಿದ್ದು, ಚಾಕುನಿಂದ ಇರಿದು ಪತಿಯಿಂದಲೇ ಪತ್ನಿಯ ಬರ್ಬರ ಕೊಲೆಯಾಗಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ಮೂಲದ ಗೀತಾ (25) ಸಾವನ್ನಪ್ಪಿರುವ ಮಹಿಳೆ ಎಂದು ತಿಳಿದುಬಂದಿದ್ದು, ಪತ್ನಿಯ ಮೇಲೆ ಅನುಮಾನ ವ್ಯಕ್ತಪಡಿಸಿ ಪತಿ ರಾಜೇಶ್ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.
ಕೊಪ್ಪಳಸದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಇಬ್ಬರೂ ಸ್ಟೀಲ್ ಪಾತ್ರೆ ಮಾಡಲು ಬಂದಿದ್ದರು. ನಾಲ್ಕು ದಿನಗಳ ಹಿಂದೆ ಇಬ್ಬರೂ ಜಗಳವಾಡಿ ಪೊಲೀಸ್ ಠಾಣೆಗೆ ಹೋಗಿದ್ದರು.ಆದರೆ ಮತ್ತೆ ಜಗಳವಾಡಿ ರಾಜೇಶ್ ಪತ್ನಿ ಗೀತಾ ವನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ.ಆರೋಪಿ ರಾಜೇಶ್ ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.