ತುಮಕೂರು: ಜಿಲ್ಲೆಯಲ್ಲಿ ರಾಜ್ಯದಲ್ಲೇ ಮತ್ತೊಂದು ಭೀಕರ ಅಪಘಾತ ಎನ್ನುವಂತೆ ಲಾರಿ ಕ್ರೂಸರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ತುಮಕೂರಿನ ಶಿರಾ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸ್ಥಳದಲ್ಲೇ ಕ್ರೂಸರ್ ಚಾಲಕ ಸಾವನ್ನಪ್ಪಿದ್ದಾನೆ.
ಮೃತ ಕ್ರೂಸರ್ ಚಾಲಕನನ್ನು ಬಸವರಾಜ್ ಎಂಬುದಾಗಿ ಗುರುತಿಸಲಾಗಿದೆ. ಮತ್ತೋರ್ವ ವ್ಯಕ್ತಿಯನ್ನು ಸುರೇಶ್ ಎಂಬುದಾಗಿ ತಿಳಿದು ಬಂದಿದೆ. ಮೃತರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು ಎಂಬುದಾಗಿ ತಿಳಿದು ಬಂದಿದೆ.
ಈ ಅಪಘಾತದಲ್ಲಿ ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಪಿಲ್ ದೇವ್ ತಲೆಗೆ ಗುಂಡು ಹಾರಿಸಲು ಬಯಸಿದ್ದೆ: ಯುವರಾಜ್ ಸಿಂಗ್ ತಂದೆ | Kapil Dev
SHOCKING : ಪೊಲೀಸ್ ಉದ್ಯೋಗ ನೇಮಕಾತಿ ಪರೀಕ್ಷೆ : `ಮುನ್ನಾಭಾಯಿ MBBS’ ಸಿನಿಮಾ ರೀತಿ ಕಾಪಿ ಮಾಡಿದ ಅಭ್ಯರ್ಥಿ.!