ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿ ವ್ಯಕ್ತಿಯೊಬ್ಬರ ಹಸುವಿನ ಕೆಚ್ಚಲನ್ನೇ ಕಿಡಿಗೇಡಿಗಳು ಕೊಯ್ದು ದುಷ್ಕೃತ್ಯವನ್ನು ಮೆರೆಯಲಾಗಿತ್ತು. ಈ ಸಂಬಂಧ ಈಗ ಕಾಟನ್ ಪೇಟೆ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳ ಕ್ರೌರ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪ್ರತಿಪಕ್ಷ ನಾಯಕ ಆರ್.ಅಶೋಕ್ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದ್ದರು.
ಈ ಬೆನ್ನಲ್ಲೇ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಹಿಂಸಾಚಾರ ತಡೆ ಕಾಯ್ದೆಯಡಿ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಮೂಲಕ ಹಸುವನ ಕೆಚ್ಚಲು ಕೊಯ್ದಂತ ದುಷ್ಕರ್ಮಿಗಳ ಕ್ರೌರ್ಯಕ್ಕೆ ಕಾನೂನು ಕ್ರಮ ಕೈಗೊಳ್ಳುವುದೊಂದೇ ಬಾಕಿಯಿದೆ.
BREAKING: ಖ್ಯಾತ ತೆಲುಗು ನಟ ವಿಕ್ಟರಿ ವೆಂಕಟೇಶ್ ಸೇರಿ ಮೂವರ ವಿರುದ್ಧ FIR ದಾಖಲು | Actors Victory Venkatesh
SHOCKING : ಪೊಲೀಸ್ ಉದ್ಯೋಗ ನೇಮಕಾತಿ ಪರೀಕ್ಷೆ : `ಮುನ್ನಾಭಾಯಿ MBBS’ ಸಿನಿಮಾ ರೀತಿ ಕಾಪಿ ಮಾಡಿದ ಅಭ್ಯರ್ಥಿ.!