ಹಾವೇರಿ : ಹಾವೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮೆಕ್ಕೆಜೋಳದ ರಾಶಿಗೆ ಬೆಂಕಿ ಬಿದ್ದು 10 ಕ್ಕೂ ಅಧಿಕ ಬಣವೆಗಳು ಸುಟ್ಟು ಭಸ್ಮವಾದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಕಲಕೋಟಿ ಗ್ರಾಮದಲ್ಲಿ ನಡೆದಿದೆ.
ಹೌದು ಗ್ರಾಮದ ರೈತರ 4 ಮೆಕ್ಕೆಜೋಳದ ತೆನೆಯ ರಾಶಿ, 6 ಮೇವಿನ ಬಣವೆಗಳು ಸುಟ್ಟು ಭಸ್ಮವಾಗಿದೆ. ರೈತರಾದ ದ್ಯಾಮಣ್ಣ ತಳವಾರ ಮತ್ತು ಮೃತ್ಯುಂಜಯ ಹಿರೇಮಠ ಸೇರಿದಂತೆ ಹಲವು ರೈತರು ಮೆಕ್ಕೆಜೋಳದ ರಾಶಿ ಮಾಡಲು ಹಾಕಿದ್ದರು. ಅಲ್ಲಿದ್ದ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬಣವೆಗಳಿಗೆ ಬೆಂಕಿ ಹತ್ತಿ ಸುಟ್ಟು ಭಸ್ಮವಾಗಿದೆ.
ಮೊದಲೇ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೆ ಏರಿದ್ದು, ಇದರ ಮಧ್ಯ ಮೆಕ್ಕೆಜೋಳದ ರಾಶಿಗೆ ಬೆಂಕಿ ಬಿದ್ದ ಕಾರಣ ರೈತರು ಕಂಗಾಲಾಗಿದ್ದಾರೆ. ಇದೀಗ ಸುಮಾರು 10 ಲಕ್ಷಕ್ಕೂ ಅಧಿಕ ಮೌಲ್ಯದ ಮೆಕ್ಕೆಜೋಳದ ತೆನೆಯ ರಾಶಿ ಸುಟ್ಟು ಭಸ್ಮವಾಗಿದೆ. ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದರು ಸಹ ಅಷ್ಟು ಬೇಗ ಬೆಂಕಿ ತಣ್ಣಗಾಗಲಿಲ್ಲ. ಸದ್ಯ ಘಟನೆ ಕುರಿತು ಸವಣೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.