ಬೆಂಗಳೂರು: ನಗರದಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದೆ. ತಾಯಿ ಹಾಗೂ ಮರಿ ಚಿರತೆ ಓಡಾಡುತ್ತಿರುವುದನ್ನು ಕಂಡಿರುವಂತ ಜನರು ಆತಂಕದಲ್ಲಿ, ಭಯ ಭೀತಿಯಲ್ಲಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಬನಶಂಕರಿಯ 6ನೇ ಹಂತದಲ್ಲಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿದೆ. ಕಳೆದ ಮೂರು ತಿಂಗಳಿನಿಂದ 10ಕ್ಕೂ ಹೆಚ್ಚು ನಾಯಿ, ಕುರಿ, ಮೇಕೆಗಳನ್ನು ಹೊತ್ತೊಯ್ದು ಚಿರತೆ ತಿಂದಿರುವುದಾಗಿ ಹೇಳಲಾಗುತ್ತಿದೆ.
ಇನ್ನೂ ಬನಶಂಕರಿಯ 6ನೇ ಹಂತದಲ್ಲಿ ತಾಯಿ ಮತ್ತು ಮರಿ ಚಿರತೆ ಕಂಡಿರುವಂತ ಜನರು ಸಂಜೆ ಹಾಗೂ ಬೆಳಗಿನ ವೇಳೆಯಲ್ಲಿ ಮನೆಯಿಂದ ಹೊರ ಬಾರದೇ ಭಯದಿಂದ ಬದುಕುತ್ತಿದ್ದಾರೆ. ಇನ್ನೂ ಶಾಲೆಗೆ ಮಕ್ಕಳನ್ನು ಕರೆದೊಯ್ಯಲು, ಕಳಿಸೋದಕ್ಕೂ ಯೋಚಿಸುವಂತ ಪರಿಸ್ಥಿತಿ ಉಂಟಾಗಿದೆ.
ಈ ಹಿಂದೆ ಇದೇ ಏರಿಯಾದಲ್ಲಿ ಚಿರತೆಯೊಂದು ಬಿಎಂಟಿಸಿ ಬಸ್ ಚಾಲಕನ ಮೇಲೆ ದಾಳಿ ಮಾಡಿತ್ತು. ಈಗ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರು ಆಂತಕದಲ್ಲಿದ್ದಾರೆ. ಕೂಡಲೇ ಅರಣ್ಯ ಇಲಾಖೆಯವರು ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.
SHOCKING : ಪೊಲೀಸ್ ಉದ್ಯೋಗ ನೇಮಕಾತಿ ಪರೀಕ್ಷೆ : `ಮುನ್ನಾಭಾಯಿ MBBS’ ಸಿನಿಮಾ ರೀತಿ ಕಾಪಿ ಮಾಡಿದ ಅಭ್ಯರ್ಥಿ.!
ಕಪಿಲ್ ದೇವ್ ತಲೆಗೆ ಗುಂಡು ಹಾರಿಸಲು ಬಯಸಿದ್ದೆ: ಯುವರಾಜ್ ಸಿಂಗ್ ತಂದೆ | Kapil Dev