ಬೆಂಗಳೂರು: ಬೆಂಗಳೂರು ವಿವಿ ಬಿಕಾಂ ಪರೀಕ್ಷೆಗೆ ಏಕಸದಸ್ಯ ನ್ಯಾಯಪೀಠದಿಂದ ತಡೆಯಾಜ್ಞೆ ನೀಡಲಾಗಿತ್ತು. ಇಂದು ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಹೈಕೋರ್ಟ್ ವಿಭಾಗೀಯ ಪೀಠವು ಬೆಂಗಳೂರು ವಿವಿಯ ಬಿಕಾಂ 1, 3 ಹಾಗೂ 5ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.
ಬೆಂಗಳೂರು ವಿಶ್ವ ವಿದ್ಯಾಲಯದ ಬಿ.ಕಾಂ ಪರೀಕ್ಷೆಗೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನೀಡಿದ್ದಂತ ತಡೆಯನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇಂತಹ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಿದಂತ ಹೈಕೋರ್ಟ್ ವಿಭಾಗೀಯ ಪೀಠವು ಬೆಂಗಳೂರು ವಿವಿ 1, 3 ಹಾಗೂ 5ನೇ ಸೆಮಿಸ್ಟರ್ ಬಿಕಾಂ ಪರೀಕ್ಷೆ ನಡೆಸಲು ಅನುಮತಿಸಿದೆ.
ಅಂದಹಾಗೇ ಸಿಎ ಫೌಂಡೇಷನ್ ಕೋರ್ಸ್ ಪರೀಕ್ಷೆ ಮತ್ತು ಸಿಎ ಮಧ್ಯಂತರ ಪರೀಕ್ಷೆಗೆ ಅಡ್ಡಿಯಾಗಿದೆ ಎಂಬುದಾಗಿ ಸೋಮವಾರದಿಂದ ನಡೆಯಬೇಕಾಗಿದ್ದ ಬೆಂಗಳೂರು ವಿವಿ ಅಧೀನದ ಕಾಲೇಜುಗಳಲ್ಲಿ ಬಿಕಾಂ ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಮರು ದಿನಾಂಕ ನಿಗದಿ ಪಡಿಸುವಂತೆಯೂ ಹೈಕೋರ್ಟ್ ಏಕ ಸದಸ್ಯ ಪೀಠವು ಆದೇಶಿಸಿತ್ತು.
ಹೈಕೋರ್ಟ್ ಏಕಸದಸ್ಯ ಪೀಠದ ತಡೆಯನ್ನು ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಬೆಂಗಳೂರು ವಿವಿಯ ಮೌಲ್ಯ ಮಾಪನ ವಿಭಾಗದ ರಿಜಿಸ್ಟ್ರಾರ್ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು. ಭಾನುವಾರದ ಇಂದು ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಅನು ಸಿವರಾಮನ್ ಹಾಗೂ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ವಿಶೇಷ ನ್ಯಾಯಪೀಠವು ಈ ಆದೇಶ ನೀಡಿದೆ. ಹೀಗಾಗಿ ನಾಳೆಯಿಂದ ನಡೆಯಬೇಕಿರುವಂತ ಬಿಕಾಂ 1, 3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ಆಗಿದೆ.
BREAKING: ಬೆಂಗಳೂರಲ್ಲಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನರು
SHOCKING : ಪೊಲೀಸ್ ಉದ್ಯೋಗ ನೇಮಕಾತಿ ಪರೀಕ್ಷೆ : `ಮುನ್ನಾಭಾಯಿ MBBS’ ಸಿನಿಮಾ ರೀತಿ ಕಾಪಿ ಮಾಡಿದ ಅಭ್ಯರ್ಥಿ.!