ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಿರುಮಲೇಶ್ ಹಾಗೂ ಉಪಾಧ್ಯಕ್ಷರಾಗಿ ಬಾಳೆಗುಂಡಿ ರಾಮಚಂದ್ರಪ್ಪ ಅವರು ಆಯ್ಕೆಯಾಗಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಉಳ್ಳೂರು ಗ್ರಾಮದಲ್ಲಿರುವಂತ ಪ್ರಾಥಮಕಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಿತು. ಇಂದಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಉಳ್ಳೂರು ಗ್ರಾಮ ಪಂಚಾಯ್ತಿ ಹಾಲಿ ಉಪಾಧ್ಯಕ್ಷ ತಿರುಮಲೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನೂ ಉಪಾಧ್ಯಕ್ಷರಾಗಿ ಬಾಳೆಗುಂಡಿ ರಾಮಚಂದ್ರ ಆಯ್ಕೆಯಾಗಿದ್ದಾರೆ.
ಅಂದಹಾಗೇ ಉಳ್ಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ಕೃಷ್ಣಮೂರ್ತಿ ಕೂಡ ಇದ್ದರು. ಆದರೇ ಕೊನೆಯ ಕ್ಷಣದಲ್ಲಿ ಸೈಲೆಂಟ್ ಆಗಿದ್ದೇ ಹಲವು ಅನುಮಾನಗಳಿಗೂ ಕಾರಣವಾಗಿದೆ.
ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ವೆಂಕಪ್ಪಗೌಡರ ಮಗ ಕೃಷ್ಣಮೂರ್ತಿ ಅವರು, ಭೀಮನಕೋಣೆಯಲ್ಲಿನ ಪಿ.ಎಲ್.ಡಿ ಬ್ಯಾಂಕ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದು, ಅಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆಯಂತೆ. ಹೀಗಾಗಿಯೇ ಇಂದಿನ ಚುನಾವಣೆಯ ಕಣದಿಂದ ಹಿಂದೆ ಸರಿದಿದ್ದಾಗಿ ಹೇಳಲಾಗುತ್ತಿದೆ.
ಒಟ್ಟಾರೆ ಸಾಗರ ತಾಲ್ಲೂಕು ಉಳ್ಳೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದಂತ ತಿರುಮಲೇಶ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಬಾಳೆಗುಂಡಿ ರಾಮಚಂದ್ರಪ್ಪ ಅವರಿಗೆ ಕನ್ನಡ ನ್ಯೂಸ್ ನೌ ಹಾಗೂ ಸುದ್ದಿ ಸಾಗರ ಪತ್ರಿಕಾ ಬಳಗದಿಂದ ಹೃತ್ಪೂರ್ವಕ ಅಭಿನಂದನೆ, ಶುಭಾಶಯಗಳನ್ನು ತಿಳಿಸುತ್ತಿದೆ.
ವರದಿ: ಉಮೇಶ್ ಮೊಗವೀರ, ಸಾಗರ
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, ಓರ್ವನಿಗೆ ಗಂಭೀರ ಗಾಯ
BREAKING NEWS: ಉತ್ತರಾಖಾಂಡದಲ್ಲಿ ಬಸ್ ಕಂದಕಕ್ಕೆ ಉರುಳಿ ಭೀಕರ ಅಪಘಾತ: ಐವರು ಸಾವು, 17 ಮಂದಿಗೆ ಗಾಯ
SHOCKING : ಪೊಲೀಸ್ ಉದ್ಯೋಗ ನೇಮಕಾತಿ ಪರೀಕ್ಷೆ : `ಮುನ್ನಾಭಾಯಿ MBBS’ ಸಿನಿಮಾ ರೀತಿ ಕಾಪಿ ಮಾಡಿದ ಅಭ್ಯರ್ಥಿ.!