ಮಂಡ್ಯ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಂಡ್ಯದಲ್ಲಿ 3 ವರ್ಷದ ಮಗುವನ್ನು ಕೊಂದು ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಜಕ್ಕನಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ತನ್ನ 3 ವರ್ಷದ ಪುತ್ರನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಕ್ಕನಹಳ್ಳಿ ಗ್ರಾಮದ ಪುಟ್ಟಸ್ವಾಮಿ ಪತ್ನಿ ಶಿಲ್ಪಾ (27), ಪುತ್ರ ದೀಕ್ಷಿತ್ (3) ಮೃತರು. ಘಟನೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ. ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.