ಮೈಸೂರು : ರಾಜ್ಯದಲ್ಲಿ ಅಘಾತಕಾರಿ ಘಟನೆಯೊಂದು ನಡೆದಿದ್ದು, ಯಮನಂತ ಚಳಿಗೆ ಆಸ್ಪತ್ರೆ ಆವರಣದಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಮೈಸೂರಿನ ಚಲುವಾಂಬ ಆಸ್ಪತ್ರೆಗೆ ಹೆಂಡತಿಯನ್ನು ಹೆರಿಗೆಗೆ ಕರೆದುಕೊಂಡು ಬಂದಿದ್ದ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ನಿವಾಸಿ ನಾಗೇಶ್ ಎಂಬಾತ ವ್ಯಕ್ತಿ ರಾತ್ರಿ ಆಸ್ಪತ್ರೆಯ ಹೊರಗಡೆ ಮಲಗಿದ್ದರು. ಈ ವೇಳೆ ತೀವ್ರ ಚಳಿಗೆ ಆವರಣದಲ್ಲೇ ಸಾವನ್ನಪ್ಪಿದ್ದಾರೆ.
ನಾಗೇಶ್ ಹೆಂಡತಿಗೆ ಮಗು ಹುಟ್ಟಿದ್ದು, ಮರು ದಿನವೇ ಸಾವನ್ನಪ್ಪಿದ್ದಾರೆ. ರಾತ್ರಿ 10.30 ಕ್ಕೆ ಮಗು ಹುಟ್ಟಿದ್ದು, ಮರುದಿನವೇ ನಾಗೇಶ್ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.