ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿಗಾಗಿ ಹಲವು ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದು, ಇದೀಗ ಮಾಗಡಿ ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಾರೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುವ ಕುರಿತು ಶಾಸಕರು ಚರ್ಚೆ ಮಾಡುತ್ತಿಲ್ಲ. ಸದ್ಯ ಈ ಕುರಿತು ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ಸಿದ್ದರಾಮಯ್ಯ ಬಳಿಕ ಉಪ ಮುಖ್ಯಮಂತ್ರಿ ಸಿಎಂ ಆಗಬೇಕಲ್ವ? ಎಂದು ತಿಳಿಸಿದರು.
ಬೇರೆ ಬೇರೆಯವರು ಆಕಾಂಕ್ಷಿಗಳು ಇದ್ದಾರೆ ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಬೇಕು ಎಂದು ಒಕ್ಕಲಿಗರ ಸಭೆಯ ವಿಚಾರವಾಗಿದೆ.ಅವರವರ ಜಾತಿ ಅಭಿಮಾನದ ಮೇಲೆ ಹೇಳಿದ್ದಾರೆ. ಅಷ್ಟೇ ಹೈಕಮಾಣ್ ನಾಯಕರು ಅಂತಿಮವಾಗಿ ಈ ಕುರಿತು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಬೆಂಗಳೂರಿನಲ್ಲಿ ಮಾಗಡಿ ಶಾಸಕ ಹೆಚ್ಚಿಸಿ ಬಾಲಕೃಷ್ಣ ಹೇಳಿಕೆ ನೀಡಿದರು.