ವಿಜಯಪುರ : ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ಬಳಿ ಆಲಮಟ್ಟಿಯ ಎಡದಂಡೆ ಕಾಲುವೆಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ನಾಲ್ವರು ಮಕ್ಕಳನ್ನು ಕಾಲುವಿಗೆ ಎಸೆದು ಕೊಂದ ಬಳಿಕ ತಾಯಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.
ಹೌದು ವಿಜಯಪುರ ಜಿಲ್ಲೆಯ ನಡುಗುಂದಿ ತಾಲೂಕಿನ ಬೆನಾಳ ಗ್ರಾಮದ ಬಳಿ ಇರುವ ಆಲಮಟ್ಟಿ ಎಡದಂಡೆ ಕಾಲುವೆಯ ಬಳಿ ತಾಯಿಯೋಬ್ಬಳು ತನ್ನ ನಾಲ್ವರು ಮಕ್ಕಳನ್ನು ಮೊದಲು ಕಾಲುವಿಗೆ ಎಸೆದಿದ್ದಾಳೆ ಬಳಿಕ ತಾನು ಕೂಡ ಮಕ್ಕಳು ಸಾವನ್ನಪ್ಪಿದ ಬಳಿಕ ತಾನು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಘಟನೆಯಲ್ಲಿ ತನು ನಿಂಗರಾಜ್ ಬಜಂತ್ರಿ (5) ರಕ್ಷಾ ನಿಂಗರಾಜ್ ಬಜಂತ್ರಿ (3) ಹುಸೇನ್ ನಿಂಗರಾಜ್ ಭಜಂತ್ರಿ ಸೇರಿದಂತೆ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಮೃತರನ್ನು ಕೋಲ್ಹಾರ ತಾಲೂಕಿನ ತಲೆಗಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ವೇಳೆ ಕಾಲುವೆಗೆ ಜಿಗಿದಿದ್ದ ತಾಯಿ ಭಾಗ್ಯಗಳನ್ನು ಕೂಡಲೇ ಸ್ಥಳಿಯರು ರಕ್ಷಣೆ ಮಾಡಿದ್ದಾರೆ ಸದ್ಯ ಘಟನಾ ಸ್ಥಳಕ್ಕೆ ನಡೆಗುಂದಿ ಠಾಣೆ ಪೊಲೀಸರು ಭೇಟಿ ನೀಡಿದ್ದು ಯಾವ ಕಾರಣಕ್ಕಾಗಿ ಈ ಒಂದು ಘಟನೆ ನಡೆದಿದೆ ಎಂದು ತನಿಖೆ ನಡೆಸುತ್ತಿದ್ದಾರೆ.