ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಬೆಳಗಾವಿ ಗಲಾಟೆಯಿಂದಲೇ ಬೀಳಲಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಗಲಾಟೆಯಿಂದಲೇ ಈ ಕಾಂಗ್ರೆಸ್ ಸರ್ಕಾರ ಸರ್ವನಾಶ ಆಗಲಿದೆ. ಈ ಹಿಂದೆ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದ್ದು, ಬೆಳಗಾವಿಯಿಂದಲೇ, ಈ ರಾಜ್ಯ ಕಾಂಗ್ರೆಸ್ ಸರ್ಕಾರವು ಅದೇ ರೀತಿ ಪತನವಾಗಲಿದೆ. ಈಗಾಗಲೇ ಬೆಳಗಾವಿ ಗಲಾಟೆ ಶುರುವಾಗಿದ್ದು, ಯಾವಾಗ ಬೇಕಾದ್ರೂ ಸರ್ಕಾರ ಬೀಳಬಹುದು ಎಂದು ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಒಡೆದ ಮನೆಯಂತಾಗಿದೆ. ಆ ಮುಖ್ಯಮಂತ್ರಿ ಕುರ್ಚಿಯ ಕಾಲು ಮುರಿಯ ಬೇಡಿ. ಕರ್ನಾಟಕದಲ್ಲಿ ಇನ್ನು ಕಾಂಗ್ರೆಸ್ ಪಕ್ಷದ ಕಥೆ ಮುಗಿಯಿತು. ಸಿಎಂ ಸಿದ್ದರಾಮಯ್ಯ ನಿನ್ನೆ ತ್ಯಾಗದ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂದು ಹೇಳಿದ್ದಾರೆ.