ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು, ನಾಳೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ 6 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು, ಹಾಸನ, ಚಾಮರಾಜನಗರ, ಮೈಸೂರು, ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜನವರಿ 15 ರಿಂದ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ರಾಜ್ಯದಲ್ಲಿ ಶೀತಾಗಾಳಿ ಬೀಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಳವಾಗುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, 5 ದಿನ ವಿಪರೀತ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ ಸೇರಿದಂತೆ ದಕ್ಷಿಣ ವಲಯದಲ್ಲಿ ಚಳಿ ಹೆಚ್ಚಿರಲಿದೆ. ತಾಪಮಾನ 2 ರಿಂದ 4ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನ ನೀಡಿದೆ. ಹಲವು ಜಿಲ್ಲೆಗಳಲ್ಲಿ 5 ದಿನಗಳ ಕಾಲ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ. ಉತ್ತರ ಕರ್ನಾಟಕ ಭಾಗದ ಒಂದೆರೆಡುಕಡೆಗಳಲ್ಲಿ ದಟ್ಟವಾದ ಮಂಜು ಆವರಿಸಲುದೆ. ದಕ್ಷಿಣ ಒಳನಾಡಿನಲ್ಲಿಯೂ ಮಂಜು ಕವಿದ ವಾತಾವರಣವಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.