ಮೈಸೂರು : ಕರ್ನಾಟಕ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಹಾಸನದ ಮಾಜಿ ಶಾಸಕ ಪ್ರೀತಂ ಜೆ ಗೌಡ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನುವಂತಹ ಸುದ್ದಿ ಇದೀಗ ಹರಿದಾಡುತ್ತಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಕಳೆದ ಕೆಲ ದಿನಗಳಿಂದ ಬಿಜೆಪಿ ಕಾರ್ಯಕ್ರಮಗಳಲ್ಲಿ ಮತ್ತು ಬಿಜೆಪಿ ವೇದಿಕೆಗಳಲ್ಲಿ ಅವರು ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಎಂದು ಹೇಳಲಾಗುತ್ತಿದೆ.ಬಿಜೆಪಿಯ ಯುವ ಮುಖಂಡರಲ್ಲಿ ಒಬ್ಬರಾಗಿರುವ ಪ್ರೀತಂ ಜೆ ಗೌಡ ಚಾಲ್ತಿಯಲ್ಲಿರುವ ಪರಿಸ್ಥಿತಿಯಲ್ಲಿ ಬಿಜೆಪಿಯಲ್ಲಿ ಸರಿಯಾದ ಯಾವುದೇ ಭವಿಷ್ಯವಿಲ್ಲ ಎಂದು ಕ್ರಮೇಣ ಪಕ್ಷದಿಂದ ಹಿಂದೆ ಸರಿಯುತ್ತಿದ್ದಾರೆ ಎಂದು ಹೇಳಲಾಗಿದೆ.
ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಪ್ರೀತಂ ಗೌಡ ಆಪ್ತರೊಬ್ಬರು ಬಹಿರಂಗ ಪಡಿಸಿದ್ದು, ಇದು ಭಾರತೀಯ ಜನತಾ ಪಾರ್ಟಿಗೆ ದೊಡ್ಡ ಆಘಾತವಾಗಿದೆ. ಬಿಜೆಪಿಯ ಯುವ ಮುಖಂಡರಲ್ಲಿ ಪ್ರಮುಖರಾಗಿರುವ ಪ್ರೀತಂ ಗೌಡ, ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯಲ್ಲಿ ನನಗೆ ಯಾವುದೇ ಭವಿಷ್ಯವಿಲ್ಲ ಎನ್ನುವ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.