ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಡಿನ್ನರ್ ಪಾರ್ಟಿ ಭಾರಿ ಸದ್ದು ಮಾಡಿದ್ದು ಈ ವೇಳೆ ಇದಕ್ಕೆ ಬ್ರೇಕ್ ಹಾಕಲು, ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿಗೆ ಭೇಟಿ ನೀಡಿ ಸಚಿವರಿಗೆ ಕೆಲವು ಸೂಚನೆ ನೀಡಿದ್ದರು. ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಸ್ಪಷ್ಟನೆ ನೀಡಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಪೂರ್ಣ ಪ್ರಮಾಣದ ಅಧ್ಯಕ್ಷರನ್ನು ಮಾಡಿ ಎನ್ನುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಈ ಕುರಿತು ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಹೈಕಮಾಂಡ್ ನಿರ್ಧಾರ ಮಾಡಲಿ. ಸುರ್ಜೆವಾಲ ಜೊತೆಗೆ ಪಕ್ಷದ ಆಗುಹೋಗುಗಳು ಮತ್ತು ಸಂಘಟನೆಯ ಬಗ್ಗೆ ಚರ್ಚೆ ಮಾಡಲಾಗಿದೆ.ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕ ಆಗಬೇಕು ಎಂದು ಹೇಳಿದ್ದೇನೆ. ಅಥವಾ ಇವರನ್ನೇ ಮುಂದುವರಿಸುವುದಾದರೆ ಆ ಕುರಿತು ಸ್ಪಷ್ಟಪಡಿಸಿ ಅಂತ ಕೂಡ ಹೇಳಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸಲಿ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ನಮಗೆ ಪೂರ್ಣ ಪ್ರಮಾಣದ ಅಧ್ಯಕ್ಷರು ಬೇಕು. ವೋಟು ತರುವವರು ಹಾಗೂ ಪಾಪ್ಯುಲರ್ ಇದ್ದವರಿಗೆ ಅಧ್ಯಕ್ಷ ಸ್ಥಾನ ನೀಡಿ. ನನ್ನನ್ನೇ ಕೆಪಿಸಿಸಿ ಅಧ್ಯಕ್ಷರಾಗಿ ಮಾಡಿ ಎಂದು ನಾನು ಕೇಳಿಲ್ಲ. ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕ ಆಗಬೇಕು ಎಂದು ಹೇಳಿದ್ದೇನೆ. ಆದರೆ ಪೂರ್ಣ ಪ್ರಮಾಣದ ಅಧ್ಯಕ್ಷರನ್ನು ನೇಮಕ ಮಾಡಿ ಎಂದಿದ್ದೇನೆ. ಗೊಂದಲಗಳಿಗೆ ಇತಿಶ್ರೀ ಹಾಡಿ ಎಂದು ಸುರ್ಜೆವಾಲಾಗೆ ನಾನು ಹೇಳಿದ್ದೇನೆ.
ಇವರೇ ಮುಂದುವರಿಯಬೇಕಾ ಅಥವಾ ಬೇಡವಾ ಅಂತ ಹೈಕಮಾಂಡ್ ನಿರ್ಧಾರ ಮಾಡಲಿ. ಡಿಸಿಎಂ ಡಿಕೆ ಶಿವಕುಮಾರ್ ಇರಬೇಕಾ ಬೇಡವಾ ಪಕ್ಷದ ಮೇಲ್ಮಟ್ಟದಲ್ಲಿ ಚರ್ಚೆ ಆಗಬೇಕು. ಸಚಿವರಾದ ಮೇಲೆ ಪಕ್ಷ ಸಂಘಟನೆಗೆ ಸಮಯ ಕೊಡುವವರ ಸಂಖ್ಯೆ ಕಡಿಮೆ ಆಗಿದೆ. 2023ರಲ್ಲಿ ಇದ್ದ ಸ್ಪೀಡ್ ಕಡಿಮೆಯಾಗಿದೆ ಎಂದು ಬೆಂಗಳೂರಿನಲ್ಲಿ ಸಚಿವ ಸದಸ್ಯ ಆಯ್ಕೆಗಳು ಹೇಳಿಕೆ ನೀಡಿದರು.
ಬೇರೆ ಹಿರಿಯ ನಾಯಕರ ಅಭಿಪ್ರಾಯ ಕೂಡ ಅದೇ ಆಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಶಾಸಕರ ಅಭಿಪ್ರಾಯ ಆಲಿಸಬೇಕು. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಕುರಿತಂತೆ ಅಭಿಪ್ರಾಯವನ್ನು ಸಂಗ್ರಹಿಸಿ ಸಿಎಂ, ಡಿಸಿಎಂ ಸೇರಿ ಎಲ್ಲಾ ಶಾಸಕರ ಅಭಿಪ್ರಾಯ ಆಲಿಸಿ ತೀರ್ಮಾನಿಸಿ.ಶಾಸಕರ ಅಭಿಪ್ರಾಯದಂತೆ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡಬೇಕು ಎಂದು ಸತೀಶ್ ಜಾರಕಿಹೊಳಿ ಆಗ್ರಹಿಸಿದರು.