ನವದೆಹಲಿ: ನಾಳೆ ನಡೆಯುತ್ತಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಮಂಡಿಸುತ್ತಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ನಾಳಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಲಿದೆ ಎಂಬುದಾಗಿಯೇ ಹೇಳಲಾಗುತ್ತಿತ್ತು. ಅಲ್ಲದೇ ಸಿಎಂ ಸಿದ್ಧರಾಮಯ್ಯ ಕೂಡ ನಾಳಿನ ಸಂಪುಟ ಸಭೆಯಲ್ಲಿ ಮಂಡಿಸುವುದಾಗಿಯೂ ತಿಳಿಸಿದ್ದರು.
ಆದರೇ ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸುತ್ತಿಲ್ಲ. ಮುಂದಿನ ವಾರ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ನಡೆಯಲಿದೆ ಎಂದರು.
ಜಾತಿ ಗಣತಿ ವರದಿಯಲ್ಲಿ ಏನಿದೆ ಅಂತ ನನಗೆ ಗೊತ್ತಿಲ್ಲ. ಇದುವರೆಗೂ ವರದಿ ಓಪನ್ ಕೂಡ ಮಾಡಿಲ್ಲ ಎಂಬುದಾಗಿ ತಿಳಿಸಿದರು.
BREAKING : ‘ಪೂಜಾ ಖೇಡ್ಕರ್’ಗೆ ಬಿಗ್ ರಿಲೀಫ್ : ಬಂಧನಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ | Puja Khedkar