ಬೆಂಗಳೂರು: ಹೊಸ ಬಿಲ್ಡಿಂಗ್ ಒಂದಕ್ಕೆ ವಿದ್ಯುತ್ ಸಂಪರ್ಕ ನೀಡಲು 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಬೆಸ್ಕಾಂ ಇಬ್ಬರು ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.
ಬೆಂಗಳೂರಿನ ಬಸನಗರದ ಬೆಸ್ಕಾಂ ಸಹಾಯಕ ಎಂಜಿನಿಯರ್ ಯೋಗರಾಜ್.ಎಲ್ ಹಾಗೂ ಬೆಸ್ಕಾಂ ಖಾಸಗಿ ಚಾಲಕ ಮುರಳಿ ಎಂಬುವರೇ ಲೋಕಾಯುಕ್ತ ಬಲೆಗೆ ಬಿದ್ದಂತವರಾಗಿದ್ದಾರೆ.
ಮಧು ಗೌಡ ಎಂಬುವರು ಹೊಸದಾಗಿ ನಿರ್ಮಿಸಲಾದ ಕಟ್ಟಡಕ್ಕೆ ಬೆಸ್ಕಾಂನಿಂದ ಹೊಸ ವಿದ್ಯುತ್ ಸಂಪರ್ಕ ನೀಡಲು 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬೆಸ್ಕಾಂ ಎಇ ಯೋಗರಾಜ್.ಎಲ್ ಅವರು ಲಂಚದ ಮೊತ್ತವನ್ನು ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಬಂಧಿಸಿದ್ದಾರೆ.
ಬೆಂಗಳೂರು ನಗರದ ಲೋಕಾಯುಕ್ತ ಎಸ್ಪಿ ಡಾ.ಕೆ ವಂಶಿಕೃಷ್ಣ ಅವರ ಮೇಲ್ವಿಚಾರಣೆಯಲ್ಲಿ ಪಿಐ ಆಂಜನ್ ಕುಮಾರ್.ವಿ, ಪಿಐ ವಿಜಯ ಕೃಷ್ಣ, ಸಿಬ್ಬಂದಿಗಳು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
BREAKING: ರಾಜ್ಯ ಸರ್ಕಾರದಿಂದ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿನ ಬೋಧಕರ ಖಾಲಿ ಹುದ್ದೆ ಭರ್ತಿಗೆ ಗ್ರೀನ್ ಸಿಗ್ನಲ್