ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೆಸಗಲಾಗಿದೆ. ಮನೆಯ ಮುಂದೆ ಆಟವಾಡುತ್ತಿದ್ದಂತ 5 ವರ್ಷದ ಬಾಲಕಿಯ ಮೇಲೆಯೇ ಅತ್ಯಾಚಾರ ಎಸಗಲಾಗಿದೆ.
ಬಳ್ಳಾರಿಯ ತೋರಣಗಲ್ ನ ಖಾಸಗಿ ಕಾರ್ಖಾನೆಯೊಂದರಲ್ಲಿ ಉತ್ತರ ಭಾರತದ ದಂಪತಿಗಳು ಕೆಲಸ ಮಾಡುತ್ತಿದ್ದರು. ಇವರಿಗೆ 5 ವರ್ಷದ ಪುತ್ರಿ ಇದ್ದರು. ಆಕೆಯನ್ನು ಪುಸಲಾಯಿಸಿ ಕರೆದೊಯ್ದಿರುವಂತ ಬಿಹಾರ ಮೂಲದ ವ್ಯಕ್ತಿಯೊಬ್ಬ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಅತ್ಯಾಚಾರದಿಂದಾಗಿ ನಿತ್ರಾಣಗೊಂಡಿದ್ದಂತ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರಚಿಕಿತ್ಸೆಯ ಮೂಲಕ ಮಗುವಿಗೆ ಚಿಕಿತ್ಸೆ ನೀಡಲಾಗಿದೆ. ಹೀಗಾಗಿ ಬಾಲಕಿ ಪ್ರಾಣಾಯಪಾಯದಿದಂ ಪಾರಾಗಿದ್ದಾಳೆ. ಬಳ್ಳಾರಿಯ ಸರ್ಕಾರಿ ಆರೋಗ್ಯ ಸಂಸ್ಥೆಯ ವೈದ್ಯರು 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಚಿತ ಪಡಿಸಿದ್ದಾರೆ.
ಇದೀಗ ಅತ್ಯಾಚಾರವೆಸಗಿದಂತ ಆರೋಪಿಯ ವಿರುದ್ಧ ಪೋಕ್ಸೋ ಕೇಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ಪುಸಲಾಯಿಸಿ ಆರೋಪಿ ಕರೆದೊಯ್ದಂತ ವೀಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಆತನನ್ನು ಬಂಧಿಸುವಂತೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯೊಂದು ಬಳ್ಳಾರಿಯ ಡಿಸಿ ಕಚೇರಿ ಎದುರು ಪ್ರತಿಭಟನೆ ಕೂಡ ನಡೆಸಿತು.
ನೀವು ಮನೆಯಲ್ಲಿ ಈ ವಸ್ತುಗಳನ್ನು ಬಳಕೆ ಮಾಡುತ್ತಿದ್ದರೇ ಇಂದೇ ನಿಲ್ಲಿಸಿ ಬಿಡಿ: ಕ್ಯಾನ್ಸರ್ ಬರಬಹುದು.!
BREAKING: ರಾಜ್ಯ ಸರ್ಕಾರದಿಂದ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿನ ಬೋಧಕರ ಖಾಲಿ ಹುದ್ದೆ ಭರ್ತಿಗೆ ಗ್ರೀನ್ ಸಿಗ್ನಲ್