ಬೆಂಗಳೂರು: ದೈಹಿಕ ಸಂಪರ್ಕಕ್ಕೆ ಪೀಡಿಸಿದಕ್ಕೆ ಯುವತಿಯೊಬ್ಬು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೈಹಿಕ ಸಂಪರ್ಕಕ್ಕಾಗಿ ಖಾಸಗಿ ಫೋಟೋ, ವಿಡಿಯೋ ತೋರಿಸಿ ವ್ಯಕ್ತಿ ಬೆದರಿಕೆ ಹಾಕಿದ್ದು, ಇದರಿಂದ ನೊಂದ 25 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. .
ನಗರದ ಹೋಟೆಲ್ ವೊಂದರಲ್ಲಿ ರೂಮ್ ಬುಕ್ ಮಾಡಿದ್ದ ಯುವತಿಯನ್ನು ಹೋಟೆಲ್ ರೂಮ್ ಗೆ ಬರುವಂತೆ ಆರೋಪಿ ಕರೆದಿದ್ದಾನೆ. ಬರದಿದ್ದರೆ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದರಿಂದ ನೊಂದ ಯುವತಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಪಿ ಸಂಬಂಧದಲ್ಲಿ ಯುವತಿಗೆ ಮಾವನಾಗಬೇಕು. ಮೊದಲು ಇಬ್ಬರು ಚೆನ್ನಾಗಿದ್ದು, ಟ್ರಿಪ್ ಹೋಗುತ್ತಿದ್ದರು. ಇತ್ತೀಚೆಗೆ ಆರೋಪಿ ದೈಹಿಕ ಸಂಪರ್ಕಕ್ಕೆ ಪೀಡಿಸುತ್ತಿದ್ದ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಎಂದು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಶಿವಕುಮಾರ್ ಮಾಹಿತಿ ನೀಡಿದ್ದಾರೆ.