ಬೆಂಗಳೂರು : ರಸ್ತೆ ದಾಟುತ್ತಿದ್ದ ಓಂಶಕ್ತಿ ಮಾಲಾಧಾರಿಗಳಿಗೆ ಕಾಂಗ್ರೆಸ್ ಶಾಸಕ ಕೆ.ಸಿ. ವಿರೇಂದ್ರ ಪಪ್ಪಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗದಲ್ಲಿ ರಸ್ತೆ ದಾಟುತ್ತಿದ್ದ ಓಂಶಕ್ತಿ ಮಾಲಾಧಾರಿಗಳಿಗೆ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.
ಗಾಯಾಳು ಮಾಲಾಧಾರಿ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.